ಸೋಮವಾರ, ಮೇ 23, 2022
24 °C

ಶಿವಮೊಗ್ಗ: ಕಾಂಗ್ರೆಸ್‌ ಕಚೇರಿಯಲ್ಲಿ ಇಂದಿರಾ ಗಾಂಧಿ ಜನ್ಮದಿನಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಅವರ 104ನೇ ಜನ್ಮದಿನಾಚರಣೆ ಆಚರಿಸಲಾಯಿತು.

ಇಂದಿರಾ ಅವರ ಸಾಧನೆ ಕುರಿತು ನುಡಿನಮನ ಸಲ್ಲಿಸಲಾಯಿತು. ಇದೇ ವೇಳೆ ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಸದಸ್ಯತ್ವದ ನೋಂದಣಿ ಅಭಿಯಾನಕ್ಕೂ ಚಾಲನೆ ನೀಡಲಾಯಿತು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಮಾತನಾಡಿ, ‘ಕೇಂದ್ರ ಸರ್ಕಾರ ರೈತವಿರೋಧಿ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದಿರುವುದು ಸ್ವಾಗತಾರ್ಹ. ರೈತರ ಹಾಗೂ ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷಗಳು ನಡೆಸಿದ ಹೋರಾಟಕ್ಕೆ ದೊರೆತ ಜಯ’ ಎಂದು ಸಂತಸ ವ್ಯಕ್ತಪಡಿಸಿದರು.

ವಿಧಾನಪರಿಷತ್‌ ಸದಸ್ಯ ಆರ್. ಪ್ರಸನ್ನಕುಮಾರ್, ಮಾಜಿ ಶಾಸಕ ಎಚ್.ಎಂ. ಚಂದ್ರಶೇಖರಪ್ಪ, ಮುಖಂಡರಾದ ಎಸ್.ಪಿ. ದಿನೇಶ್, ಎಚ್.ಸಿ. ಯೋಗೀಶ್, ಕಲಗೋಡು ರತ್ನಾಕರ, ಆರಿಫ್ ವುಲ್ಲಾ, ಪಂಡಿತ್‌ ವಿಶ್ವನಾಥ್‌, ನಾಗರಾಜ್, ನಿರಂಜನ್, ಇಕ್ಕೇರಿ ರಮೇಶ್, ಸಿ.ಎಸ್. ಚಂದ್ರಭೂಪಾಲ್, ಸ್ಟೆಲ್ಲಾ ಮಾರ್ಟಿನ್ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು