ಬುಧವಾರ, ಜೂನ್ 16, 2021
22 °C

ಆಂಬುಲೆನ್ಸ್‌ ಸಿಗದೆ ಕೊರೊನಾ ಸೋಂಕಿತ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆನವಟ್ಟಿ: ಸಮೀಪದ ತಿಮ್ಮಾಪುರ ಗ್ರಾಮದಲ್ಲಿ ಕೊರೊನಾ ಸೋಂಕಿತರೊಬ್ಬರಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಆಂಬುಲೆನ್ಸ್‌ ಸಿಗದೆ ಆಸ್ಪತ್ರೆಗೆ ಸಾಗಿಸುವುದು ವಿಳಂಬವಾಗಿ ಮೃತಪಟ್ಟಿದ್ದಾರೆ.

ಗ್ರಾಮದ ದಿನೇಶ್ (38) ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಶುಕ್ರವಾರ ರಾತ್ರಿ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ತಕ್ಷಣ ಆಂಬುಲೆನ್ಸ್‌ಗೆ ಕರೆ
ಮಾಡಿದರೂ ಸಕಾಲಕ್ಕೆ ಸಿಗಲಿಲ್ಲ. ಬಳಿಕ ಆಂಬುಲೆನ್ಸ್ ಬಂದು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.

ಈ ಬಗ್ಗೆ ಮಾಹಿತಿ ಪಡೆಯಲು ತಾಲ್ಲೂಕು ಆರೋಗ್ಯ ಅಧಿಕಾರಿಗೆ ಕರೆ ಮಾಡಿದರೂ ಸಂಪರ್ಕಕ್ಕೆ ಸಿಗಲಿಲ್ಲ.

ಅಗತ್ಯ ವ್ಯವಸ್ಥೆ ಮಾಡಿ: ಆನವಟ್ಟಿ ಹಾಗೂ ಸುತ್ತಲಿನ ಗ್ರಾಮಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಕೋವಿಡ್ ಸೋಂಕಿತರಿಗೆ ಒಂದು ಆಂಬುಲೆನ್ಸ್ ಮಾತ್ರ ಇದ್ದು, ತೀವ್ರ ಉಸಿರಾಟದ ತೊಂದರೆ ಇರುವವರಿಗೆ ಜಿಲ್ಲಾ ಆಸ್ಪತ್ರೆಗೆ ಸಕಾಲಕ್ಕೆ ತಲುಪಿಸಲು ಸಾಧ್ಯವಾಗುತ್ತಿಲ್ಲ. ಆನವಟ್ಟಿ ಭಾಗಕ್ಕೆ ಇನ್ನೂ ಎರಡು ಆಂಬುಲೆನ್ಸ್‌ಗಳನ್ನು ನೀಡಬೇಕು. ಕ್ಷೇತ್ರದ ಶಾಸಕರು ಹಾಗೂ ಸಂಸದರು ಹೆಚ್ಚಿನ ಒತ್ತು ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಅನೀಶ್ ಪಾಟೀಲ್ ಮನವಿ ಮಾಡಿದ್ದಾರೆ.

ಈಗಾಗಲೇ ಆನವಟ್ಟಿ ಆಸ್ಪತ್ರೆಯಲ್ಲಿ ಆಮ್ಲಜನಕದ ವ್ಯವಸ್ಥೆ ಇದ್ದು, ಕೊರೊನಾ ಪ್ರಕರಣಗಳಿಗೆ ಸಾಲುತ್ತಿಲ್ಲ. ಇಲ್ಲಿಯೇ ವೆಂಟಿಲೇಟರ್ ಹಾಗೂ ಬೆಡ್‍ಗಳ ಸಂಖ್ಯೆ ಹೆಚ್ಚಿಸಬೇಕು. ತೀವ್ರ ಉಸಿರಾಟ ತೊಂದರೆ ಒಳಗಾಗಿ 100 ಕಿ.ಮೀ ದೂರದ ಜಿಲ್ಲಾ ಆಸ್ಪತ್ರೆಗೆ ಹೋಗುವುದರೊಳಗೆ ರೋಗಿಗಳು ಮೃತಪಡುತ್ತಾರೆ. ಅಂತಹವರಿಗೆ ಇಲ್ಲೇ ಚಿಕಿತ್ಸೆ ಲಭ್ಯವಾಗುವಂತೆ ಮಾಡಬೇಕು ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಜರ್ಮಲೆ ಚಂದ್ರಶೇಖರ್ ಒತ್ತಾಯಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು