ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ಯದಂಗಡಿ ಮುಚ್ಚಲು ಒತ್ತಾಯ

Last Updated 26 ಸೆಪ್ಟೆಂಬರ್ 2021, 4:04 IST
ಅಕ್ಷರ ಗಾತ್ರ

ಸಾಗರ: ತಾಲ್ಲೂಕಿನ ಪಡವಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳ್ಳಿಕೊಪ್ಪ ಗ್ರಾಮದಲ್ಲಿ ಆರಂಭಗೊಂಡಿರುವ ಎಂಎಸ್‌ಐಎಲ್ ಮದ್ಯ ಮಾರಾಟ ಮಳಿಗೆಯನ್ನು ಮುಚ್ಚುವಂತೆ ಒತ್ತಾಯಿಸಿ ಗ್ರಾಮಸ್ಥರು ಶನಿವಾರ ಉಪವಾಸ ಸತ್ಯಾಗ್ರಹ ನಡೆಸಿದರು.

ಸ್ಥಳಕ್ಕೆ ಭೇಟಿ ನೀಡಿದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮಾತನಾಡಿ, ‘ಗ್ರಾಮಸ್ಥರ ವಿರೋಧದ ನಡುವೆಯೂ ಬೆಳ್ಳಿಕೊಪ್ಪದಲ್ಲಿ ಮದ್ಯದಂಗಡಿ ತೆರೆದಿರುವ ಕ್ರಮ ಸರಿಯಲ್ಲ. ಹಲವು ದಿನಗಳಿಂದ ಗ್ರಾಮಸ್ಥರು ನಡೆಸುತ್ತಿರುವ ಹೋರಾಟಕ್ಕೆ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಪಂದಿಸಬೇಕು’ ಎಂದು ಒತ್ತಾಯಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್. ಜಯಂತ್, ‘ಗ್ರಾಮದಲ್ಲಿ ಮದ್ಯದಂಗಡಿ ತೆರೆಯುವುದಿಲ್ಲ ಎಂದು ಜಿಲ್ಲಾಧಿಕಾರಿ ಗ್ರಾಮಸ್ಥರಿಗೆ ನೀಡಿದ್ದ ಆಶ್ವಾಸನೆ ಸುಳ್ಳಾಗಿದೆ. ಗ್ರಾಮದ ಹೆಣ್ಣು ಮಕ್ಕಳು ಶಾಲೆಗೆ ಹೋಗದೇ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೊಂದು ಸಣ್ಣ ಹೋರಾಟ ಎಂದು ಭಾವಿಸದೇ ತಾಲ್ಲೂಕು ಆಡಳಿತ ಗಂಭೀರವಾಗಿ ಪರಿಗಣಿಸಬೇಕು’ ಎಂದು ಆಗ್ರಹಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಅನಿತಾಕುಮಾರಿ, ನಗರಸಭೆ ಸದಸ್ಯೆ ಎನ್.ಲಲಿತಮ್ಮ, ಕೆಪಿಸಿಸಿ ಕಾರ್ಯದರ್ಶಿ ಡಾ.ರಾಜನಂದಿನಿ ಕಾಗೋಡು, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಮಾಜಿ ಉಪಾಧ್ಯಕ್ಷ ಅಶೋಕ್ ಬರದವಳ್ಳಿ, ಸಾಮಾಜಿಕ ಕಾರ್ಯಕರ್ತ ಶಿವಾನಂದ ಕುಗ್ವೆ, ತಾಲ್ಲೂಕು ಪ್ರಗತಿಪರ ಯುವ ಒಕ್ಕೂಟದ ಅಧ್ಯಕ್ಷ ರಮೇಶ್ ಇ. ಕೆಳದಿ, ರೈತ ಸಂಘದ ದಿನೇಶ್ ಶಿರವಾಳ, ಹೊಯ್ಸಳ ಗಣಪತಿಯಪ್ಪ, ಗ್ರಾಮ ಸುಧಾರಣಾ ಸಮಿತಿ ಅಧ್ಯಕ್ಷ ಸುರೇಶ್, ಚಂದ್ರಪ್ಪ ಎಲ್. ಮಂಜಪ್ಪ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT