ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೀರ್ಥಹಳ್ಳಿ: ಸೈನಿಕರ ಜಮೀನು ಮಂಜೂರಿಗೆ ಒತ್ತಾಯ

Last Updated 8 ಅಕ್ಟೋಬರ್ 2021, 5:53 IST
ಅಕ್ಷರ ಗಾತ್ರ

ತೀರ್ಥಹಳ್ಳಿ: ಕಂದಾಯ ಇಲಾಖೆ ಹೊರಡಿಸಿದ ಅದೇಶದಂತೆ ವ್ಯವಸಾಯ ಉದ್ದೇಶಕ್ಕೆ ಭೂಮಿ ಮಂಜೂರು ಮಾಡಬೇಕು ಎಂದು ಆಗ್ರಹಿಸಿ ಗುರುವಾರ ತಾಲ್ಲೂಕು ಕಚೇರಿ ಮುಂಭಾಗ ಮಾಜಿ ಸೈನಿಕರು ಪ್ರತಿಭಟನೆ ನಡೆಸಿದರು.

ಸರ್ಕಾರಿ ಬಂಜರು, ಸರ್ಕಾರಿ ಬೀಳು, ಗೋಮಾಳ, ಸೊಪ್ಪಿನಬೆಟ್ಟ ಇತ್ಯಾದಿ ಜಾಗದಲ್ಲಿ ಭೂಮಿ ಮಂಜೂರು ಮಾಡಬೇಕು. ಒತ್ತುವರಿ ಸಕ್ರಮಕ್ಕೆ ಅರ್ಜಿ ಸಲ್ಲಿಕೆ ಆಗಿವೆ. ಸೈನಿಕರ ಅರ್ಜಿಗೆ ಹಿಂಬರಹ ಸಿಗುತ್ತಿದೆ ಎಂದು ಮಾಜಿ ಸೈನಿಕರ ಸಂಘದ ಅಧ್ಯಕ್ಷ ಶಿವಪ್ಪಕೆ.ಎನ್. ದೂರಿದರು.

ರಾಜ ಮಹಾರಾಜರ ಕಾಲದಿಂದ ಸ್ವಾತಂತ್ರ್ಯಾನಂತರವೂ ಪ್ರತಿ ಗ್ರಾಮದಲ್ಲಿ 100 ಎಕರೆ ಭೂಮಿಯಲ್ಲಿ 10 ಎಕರೆ ಕೃಷಿ ಯೋಗ್ಯ ಭೂಮಿಯನ್ನು ಸೈನಿಕರಿಗೆ ನೀಡಲಾಗಿದೆ. ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಸೈನಿಕರ ಸೇವೆಯನ್ನು ಪರಿಗಣಿಸದೆ ಇತ್ತೀಚೆಗೆ ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದರು.

ವಿಶೇಷ ಕೋಟಾದ ಅಡಿಯಲ್ಲಿ ಸೈನಿಕರಿಗೆ ಜಮೀನು ಮಂಜೂರು ಮಾಡುವಾಗ ಬಗರ್‌ಹುಕುಂ ಮಾನದಂಡಗಳನ್ನು ಪರಿಗಣಿಸದೆ ಜಾಗ ಮಂಜೂರು ಮಾಡಲು ಕ್ರಮ ವಹಿಸಬೇಕು ಎಂದು ಸೈನಿಕರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT