ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಶ್ವರಾನಂದಪುರಿ ಸ್ವಾಮೀಜಿಗೆ ಅಪಮಾನ: ತನಿಖೆಗೆ ಈಶ್ವರಪ್ಪ ಆಗ್ರಹ

Published 3 ಫೆಬ್ರುವರಿ 2024, 10:48 IST
Last Updated 3 ಫೆಬ್ರುವರಿ 2024, 10:48 IST
ಅಕ್ಷರ ಗಾತ್ರ

ಶಿವಮೊಗ್ಗ: ಬಾಗೂರಿನ ಚನ್ನಕೇಶವ ದೇವಾಲಯಲ್ಲಿ ಹೊಸದುರ್ಗ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ ಅವರಿಗೆ ಅಪಮಾನ ಆಗಿದ್ದರೆ, ಅದು ಸಮಸ್ತ ಹಿಂದೂ ಸಮಾಜಕ್ಕೆ ಆದ ಅಪಮಾನ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.

ಅಪಮಾನ ಘಟನೆ ಸತ್ಯವಾಗಿದ್ದರೆ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಶನಿವಾರ ಇಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು.

’ನಾನು ಹೋದ ಬಳಿಕ ದೇವಸ್ಥಾನ ಸ್ವಚ್ಛ ಮಾಡಿದ್ದಾರೆ‘ ಎಂದು ಈಶ್ವರಾನಂದಪುರಿ ಸ್ವಾಮೀಜಿ ಹೇಳಿದ್ದಾರೆ. ’ನಾವು ಸ್ವಾಮೀಜಿಗೆ ಸನ್ಮಾನ ಮಾಡಿ ಗೌರವ ಸಲ್ಲಿಸಿದ್ದೇವೆ ‘ಎಂದು ದೇವಸ್ಥಾನದ ಅರ್ಚಕರು ತಿಳಿಸಿದ್ದಾರೆ. ಹಾಗಾದರೆ ಎಲ್ಲಿ ಗೊಂದಲ ಆಗಿದೆ ಎಂಬುದು ಬಹಿರಂಗವಾಗಬೇಕು. ಆ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

’ಜಾತಿ ವ್ಯವಸ್ಥೆಯ ಕಾರಣಕ್ಕೆ ಚನ್ನಕೇಶವ ದೇವಾಲಯಕ್ಕೆ ಹೋಗಲ್ಲ ಎಂದು ಈಶ್ವರಾನಂದಪುರಿ ಸ್ವಾಮೀಜಿ ಹೇಳಿದ್ದಾರೆ. ಉಡುಪಿಯಲ್ಲಿ ಶ್ರೀಕೃಷ್ಣ ಕನಕದಾಸರ ಭಕ್ತಿ ಮೆಚ್ಚಿ ಗೋಡೆ ಒಡೆದು ದರ್ಶನ ನೀಡಿದ್ದ ಘಟನೆ ಎಲ್ಲರಿಗೂ ಗೊತ್ತಿದೆ‘ ಎಂದು ಮಾರ್ಮಿಕವಾಗಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT