ಭಾನುವಾರ, ಅಕ್ಟೋಬರ್ 24, 2021
20 °C

ಐಟಿ ದಾಳಿ ಉಪಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ: ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿಕಾರಿಪುರ: ಆಪ್ತ ಉಮೇಶ್ ಮನೆ ಮೇಲೆ ನಡೆದ ಐಟಿ ದಾಳಿ ಉಪಚುನಾವಣೆ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯಕ್ಕೂ ಉಮೇಶ್ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿಗೂ ಸಂಬಂಧ ಇಲ್ಲ ಎಂದರು,

ಇದು ರಾಜಕೀಯ ಪ್ರೇರಿತ ದಾಳಿ ಅಲ್ಲ. ಉಮೇಶ್ ಅವರನ್ನು  ವಿಚಾರಣೆಗೆ ಕರೆದಿದ್ದಾರೆ, ಅವರು ಹೋಗುತ್ತಾರೆ. ಆದಾಯ ತೆರಿಗೆ ಅಧಿಕಾರಿಗಳು ಕಾನೂನು ರೀತಿ ಕ್ರಮ ಕೈಗೊಳ್ಳಲ್ಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು