ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಡು ಕಂಡ ಶ್ರೇಷ್ಠ ಶಿಲ್ಪಿ ಜಕಣಾಚಾರಿ- ನಾಗೇಂದ್ರ ಹೊನ್ನಾಳಿ

ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಹೊನ್ನಾಳಿ
Last Updated 2 ಜನವರಿ 2023, 4:14 IST
ಅಕ್ಷರ ಗಾತ್ರ

ಶಿವಮೊಗ್ಗ: ನಾಡು ಕಂಡ ಶ್ರೇಷ್ಠ ಶಿಲ್ಪಿ, ಕಲೆ ಹಾಗೂ ವ್ಯಕ್ತಿತ್ವದ ಮೂಲಕ ಸಮಾಜಕ್ಕೆ ಶಿಲ್ಪ ಕಲೆಯ ಮಹತ್ವವನ್ನು ಸಾರಿದವರು ಅಮರಶಿಲ್ಪಿ ಜಕಣಾಚಾರಿ ಅವರು ಸಮಾಜಕ್ಕೆ ಮಾದರಿ ಆಗಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಹೊನ್ನಾಳಿ ತಿಳಿಸಿದರು.

ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ವಿಶ್ವ ಕರ್ಮ ಮಹಾಸಭಾದಿಂದ ಭಾನುವಾರ ಆಯೋಜಿಸಿದ್ದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬೇಲೂರು ಹಳೆಬೀಡು ದೇವಾಲಯಗಳನ್ನು ಜಗತ್ತಿನ ಮೂಲೆ ಮೂಲೆಯಿಂದ ಜನರು ಬಂದು ಕಣ್ತುಂಬಿಕೊಳ್ಳುತ್ತಾರೆ. ಇದೇ ರೀತಿ ಅನೇಕ ದೇವಾಲಯಗಳು ಜಕಣಾಚಾರಿ ಅವರ ಹೆಸರನ್ನು ಹೇಳುತ್ತವೆ ಎಂದರು.

ಜಕಣಾಚಾರಿ ಅವರಲ್ಲಿ ಪ್ರಾಮಾಣಿಕತೆ ಇತ್ತು. ಪ್ರತಿಯೊಬ್ಬರೂ ಅವರಂತೆ ಪ್ರಾಮಾಣಿಕತೆ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್. ಉಮೇಶ್, ಉಪನ್ಯಾಸಕ ಜಿ.ಡಿ. ಇಳಿಯರಾಜ್ ಇಟ್ಟಗಿ, ಕಲ್ಪನಾ ರಮೇಶ್, ನಿರಂಜನ್ ಮೂರ್ತಿ, ಸೋಮಚಾರ್, ಶ್ರೀನಿವಾಸ ಮೂರ್ತಿ, ರಮೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT