ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೀರ್ಥಹಳ್ಳಿ | ಕಾಟಾಚಾರದ ಜೆಜೆಎಂ ಕಾಮಗಾರಿ: ಪ್ರತಿಭಟನೆಯ ಎಚ್ಚರಿಕೆ

Published 9 ಮಾರ್ಚ್ 2024, 14:18 IST
Last Updated 9 ಮಾರ್ಚ್ 2024, 14:18 IST
ಅಕ್ಷರ ಗಾತ್ರ

ತೀರ್ಥಹಳ್ಳಿ: ಜೆಜೆಎಂ ಯೋಜನೆ ಕಾಮಗಾರಿ ಸರಿಯಾಗಿ ನಡೆಯುತ್ತಿಲ್ಲ. ಕಾಟಾಚಾರಕ್ಕೆ ಜೆಜೆಎಂ ಕಾಮಗಾರಿಯ ಪೈಪ್‌ ಲೈನ್‌ ಅಳವಡಿಸಲಾಗುತ್ತಿದೆ. ಇದರ ವಿರುದ್ಧ ಪ್ರತಿಭಟನೆ ಅನಿವಾರ್ಯ ಎಂದು ಗ್ರಾಮ ಪಂಚಾಯಿತಿ ಒಕ್ಕೂಟದ ಉಪಾಧ್ಯಕ್ಷ ಯು.ಡಿ. ವೆಂಕಟೇಶ್ ಎಚ್ಚರಿಕೆ ನೀಡಿದ್ದಾರೆ.

‘ಕುಡಿಯುವ ನೀರಿನ ಅಭಾವವಿದ್ದರೂ ಬೋರ್‌ವೆಲ್‌ ಕೊರೆಸುತ್ತಿಲ್ಲ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇ, ಗ್ರಾಮ ಪಂಚಾಯಿತಿ ಅಧ್ಯಕ್ಷರು ಕರೆ ಮಾಡಿದರೂ, ಸ್ವೀಕರಿಸುವುದಿಲ್ಲ. ತಕ್ಷಣ ಯೋಜನೆ ಅನುಷ್ಠಾನದಲ್ಲಿ ಆಗುತ್ತಿರುವ ದೋಷ ಸರಿಪಡಿಸದಿದ್ದರೆ ಇಲಾಖೆಯ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತೇವೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT