ಬುಧವಾರ, ಮೇ 25, 2022
30 °C

ಈಶ್ವರಪ್ಪ ಬಂಧನಕ್ಕೆ ಜೆಡಿಎಸ್‌ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆಗೆ ಸಚಿವ ಕೆ.ಎಸ್. ಈಶ್ವರಪ್ಪ ಕಾರಣರಾಗಿದ್ದು, ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಜೆಡಿಎಸ್‌ನಿಂದ ಬುಧವಾರ ಸಚಿವ ಕೆ.ಎಸ್‌. ಈಶ್ವರಪ್ಪ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

‘ರಾಜ್ಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯಲ್ಲಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಗುತ್ತಿಗೆದಾರರಿಂದ ಶೇ 40 ಕಮಿಷನ್ ಪಡೆಯುತ್ತಿದ್ದಾರೆ ಎಂಬ ಮಾಹಿತಿಯನ್ನು ಗುತ್ತಿಗೆದಾರ ಸಂತೋಷ್ ಪಾಟೀಲ ಈ ಹಿಂದೆ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗೆ ಪತ್ರ ಬರೆದು ಬಯಲು ಮಾಡಿದ್ದರು. ಈಗ ಸಂತೋಷ್ ಪಾಟೀಲ ಆತ್ಮಹತ್ಯೆ ಮಾಡಿಕೊಂಡಿರುವುದು ಅನುಮಾನಕ್ಕೆ ಕಾರಣವಾಗಿದೆ. ಈಶ್ವರಪ್ಪ ಅವರೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಕೂಡಲೇ ಅವರನ್ನು ಸರ್ಕಾರ ಸಚಿವ ಸ್ಥಾನದಿಂದ ವಜಾಮಾಡಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಕೂಡಲೇ ಈಶ್ವರಪ್ಪ ಅವರನ್ನು ಬಂಧಿಸಬೇಕು. ಆತ್ಮಹತ್ಯೆ ಪ್ರಕರಣವನ್ನು ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಜೆಡಿಎಸ್ ಕಾರ್ಯಾಲಯದಿಂದ ಮೆರವಣಿಗೆಯಲ್ಲಿ ಹೊರಟ ಪ್ರತಿಭಟನಕಾರರು ಸಚಿವ ಈಶ್ವರಪ್ಪ ಅವರ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು, ಪೊಲೀಸರು ಅದಕ್ಕೆ ಅವಕಾಶ ನೀಡಲಿಲ್ಲ.

ಜೆಡಿಎಸ್ ಮುಖಂಡರಾದ ಕಾಂತರಾಜ್, ರಾಮಕೃಷ್ಣ, ಸುಬ್ಬೇಗೌಡ, ಎಚ್. ಫಾಲಾಕ್ಷಿ, ಏಳುಮಲೈ ಬಾಬು, ನರಸಿಂಹ, ವಾಜಿದ್, ಗೀತಾ ಸತೀಶ್, ಶಾಂತ ಸುರೇಂದ್ರ, ಪ್ರಸನ್ನಕುಮಾರ್, ರೇಖಾ ಚಂದ್ರಶೇಖರ್, ಉಷಾ ನಾಯಕ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.