ಮಂಗಳವಾರ, ಮಾರ್ಚ್ 21, 2023
20 °C

ಎಲ್ಲರಿಗೂ ಲಸಿಕೆ ನೀಡಲು ಜೆಡಿಎಸ್‌ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್‌ ಲಸಿಕೆ ನೀಡುವಲ್ಲಿ ಆರೋಗ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಪಾಲಿಕೆ ಸದಸ್ಯ ನಾಗರಾಜ್ ಕಂಕಾರಿ ನೇತೃತ್ವದಲ್ಲಿ ಜೆಡಿಎಸ್‌ ಕಾರ್ಯಕರ್ತರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಎದುರು ಶುಕ್ರವಾರ ಧರಣಿ ನಡೆಸಿದರು.

ಕೊರೊನಾ ಎರಡು ಅಲೆಗಳಿಂದ ಜನರು ಚೇತರಿಸಿಕೊಂಡಿಲ್ಲ. ಇದರ ನಡುವೆ ಮೂರನೇ ಅಲೆಯ ಆತಂಕವಿದೆ. ಲಸಿಕೆ ನೀಡುವ ಕಾರ್ಯ ಹಿಂದೆ ಉಳಿದಿದೆ. ಲಸಿಕೆ ಹಾಕಿಸಿಕೊಳ್ಳಲು ಪರದಾಡುವಂತಾಗಿದೆ. ಎಲ್ಲಾ ಆರೋಗ್ಯ ಕೇಂದ್ರಗಳಲ್ಲೂ ಲಸಿಕೆ ಖಾಲಿಯಾಗಿದೆ ಎಂದು ಅಧಿಕಾರಿಗಳು ಹೇಳುತ್ತಾರೆ ಎಂದು ಆರೋಪಿಸಿದರು.

ಲಸಿಕೆ ತೆಗೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮತ್ತು ವಾರದ ಒಂದು ದಿನ ಆರೋಗ್ಯ ಕೇಂದ್ರದ ವ್ಯಾಪ್ತಿಯೊಳಗಿನ ಸಮುದಾಯ ಭವನ ಅಥವಾ ಶಾಲಾ, ಕಾಲೇಜುಗಳಲ್ಲಿ ಲಸಿಕೆ ನೀಡಬೇಕು. ಪ್ರತಿಯೊಬ್ಬರಿಗೂ ಲಸಿಕೆ ದೊರಕಿಸಲು ಆರೋಗ್ಯ ಇಲಾಖೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಸುಲಭವಾಗಿ ಸಿಗುವ ಲಸಿಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಏಕೆ ಸಿಗುತ್ತಿಲ್ಲ ಎಂದು  ಪ್ರಶ್ನಿಸಿದರು.

ನಗರ ಪಾಲಿಕೆ ಮಾಜಿ ಉಪ ಮೇಯರ್ ಎಚ್.ಪಾಲಾಕ್ಷಿ, ಮುಖಂಡ
ರಾದ ನರಸಿಂಹ ಗಂಧದಮನೆ, ಶ್ಯಾಮ್, ಅನಿಲ್‌ಕುಮಾರ್, ಸುಂದರ್, ವಿನಯ್, ಭಾಸ್ಕರ, ನವಿಲೆ ಮಂಜುನಾಥ್, ರಾಜಮ್ಮ, ಶಾಂತಾ ಸುರೇಂದ್ರ, ಕವಿತಾ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.