ಸಾಗರ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಉಪವಿಭಾಗಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಡುಗೆ ಎಣ್ಣೆ, ರಸಗೊಬ್ಬರ, ವಿದ್ಯುತ್ ಸೇರಿ ಅಗತ್ಯವಸ್ತು ಮತ್ತು ಸೇವೆಗಳ ಬೆಲೆ ಗಗನಕ್ಕೆ ಏರಿದೆ. ಕೂಡಲೇ ಅವುಗಳನ್ನು ಇಳಿಸುವತ್ತ ಸರ್ಕಾರ ಗಮನಹರಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಕೋವಿಡ್‌ನಿಂದ ಮೃತಪಟ್ಟ, ಬಡತನ ರೇಖೆಗಿಂತ ಕೆಳಗಿರುವ ವ್ಯಕ್ತಿಗಳ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ ನೀಡಬೇಕು. ತಾಲ್ಲೂಕಿನ ಬಗರ್‌ಹುಕುಂ ಸಮಿತಿ ಸಭೆ ಕರೆದು ಹಕ್ಕುಪತ್ರ ವಿತರಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ತಾಲ್ಲೂಕು ಕಚೇರಿ ಹಾಗೂ ನಗರಸಭೆ ಯಲ್ಲಿ ಲಂಚ ಕೊಡದೆ ಯಾವ ಕೆಲಸವೂ ಆಗುತ್ತಿಲ್ಲ. ಮಧ್ಯವರ್ತಿಗಳ ಹಾವಳಿ ವಿಪರೀತವಾಗಿದ್ದು, ಇದನ್ನು ತಡೆಯಲು ಶಾಸಕರು ವಿಫಲರಾಗಿದ್ದಾರೆ ಎಂದು ದೂರಿದರು. ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಕನ್ನಪ್ಪ ಬೆಳಲಮಕ್ಕಿ, ಎಚ್.ಕೆ. ಅಣ್ಣಪ್ಪ, ವಿ. ಜಿ. ಮನೋಹರ್, ಚಕ್ರಪಾಣಿ, ವಸಂತ ಶೇಟ್, ಸೋಮಶೇಖರ, ಇಕ್ಬಾಲ್ ಖಾನ್, ಸಿ.ಕೆ. ಪಟೇಲ್, ನಾಗರಾಜ್, ದ್ಯಾವಪ್ಪ ರೊಡ್ಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.