ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಸಿಗರಿಗೆ ಮುಕ್ತವಾಗಲಿದೆ ಜೋಗ ಜಲಪಾತ

ಸುರಕ್ಷತಾ ಕ್ರಮಗಳೊಂದಿಗೆ ಇಂದಿನಿಂದ ವೀಕ್ಷಣೆಗೆ ಅವಕಾಶ
Last Updated 7 ಜೂನ್ 2020, 20:44 IST
ಅಕ್ಷರ ಗಾತ್ರ

ಕಾರ್ಗಲ್: ಕೋವಿಡ್–19 ಭೀತಿ ಹಿನ್ನೆಲೆಯಲ್ಲಿ ಮುಚ್ಚಿದ್ದ ಜೋಗ ಜಲಪಾತ ವೀಕ್ಷಣೆಯ ಪ್ರಮುಖ ಗೇಟ್ ಜೂನ್ 8ರಂದು ತೆರೆಯಲಿದೆ.

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಪ್ರವಾಸಿಗರಿಗೆ ಜೋಗ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಜೋಗ ನಿರ್ವಹಣಾ ಪ್ರಾಧಿಕಾರದ ಜಂಟಿ ನಿರ್ದೇಶಕ ರಾಮಕೃಷ್ಣ ತಿಳಿಸಿದರು.

‘ಪ್ರವಾಸಿಗರನ್ನು ಪ್ರಾಧಿಕಾರದ ಪ್ರಧಾನ ಬಾಗಿಲಲ್ಲಿಯೇ ಥರ್ಮಲ್‌ ಸ್ಕ್ರೀನಿಂಗ್‌ಗೆ ಒಳಪಡಿಸಲಾಗುತ್ತದೆ. ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಸ್ಯಾನಿಟೈಸರ್ ನೀಡುವ ವ್ಯವಸ್ಥೆ ಮಾಡಲಾಗಿದೆ. ಜೋಗದ ಗುಂಡಿಯ ಪ್ರದೇಶಕ್ಕೆ ತೆರಳುವ ಮಾರ್ಗವನ್ನು ತೆರೆಯುವ ಬಗ್ಗೆ ಜಿಲ್ಲಾಧಿಕಾರಿ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

‘ಮುಂಗಾರು ಮಳೆಯ ಆಗಮನವಾಗಿರುವುದರಿಂದ ಜಲಸಿರಿಯ ವೈಭವ ಮರುಕಳಿಸುತ್ತಿದೆ. ರಾಜಾ, ರೋರರ್, ರಾಕೆಟ್ ಮತ್ತು ರಾಣಿ ಜಲಪಾತಗಳು ನಿಧಾನವಾಗಿ ಮೈದುಂಬುತ್ತಿದೆ. ಜಲಧಾರೆಯ ವೈಭವ ಕಣ್ತುಂಬಿಕೊಳ್ಳಲು ಪ್ರವಾಸಿಗರು ಬರುವ ನಿರೀಕ್ಷೆಯಿದೆ. ಅಗತ್ಯ ಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT