ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗ್ಯಾರಂಟಿ’ ಕಾಂಗ್ರೆಸ್‌ ಕೈಹಿಡಿಯುವುದಿಲ್ಲ: ಅಣ್ಣಾಮಲೈ

Published 25 ಏಪ್ರಿಲ್ 2024, 14:37 IST
Last Updated 25 ಏಪ್ರಿಲ್ 2024, 14:37 IST
ಅಕ್ಷರ ಗಾತ್ರ

ಶಿವಮೊಗ್ಗ: ‘ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದಿರುವುದು ಗ್ಯಾರಂಟಿ ಭರವಸೆಯಿಂದಲ್ಲ. ಅದಕ್ಕೆ ಬಿಜೆಪಿ ಆಡಳಿತ ವಿರೋಧಿ ಅಲೆಯೂ ಸೇರಿದಂತೆ ಬೇರೆ ಬೇರೆ ಕಾರಣಗಳಿದ್ದವು’ ಎಂದು ಬಿಜೆಪಿಯ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿದರು.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಗೆ ಕೂರುವುದಕ್ಕೂ, ರೆಂಬೆ ಮುರಿಯುವುದಕ್ಕೂ ಸಂಬಂಧವಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ಗ್ಯಾರಂಟಿ ಸಹಾಯ ಮಾಡಿದೆ ಎಂದು ಕಾಂಗ್ರೆಸ್‌ನವರು ಭಾವಿಸಿದ್ದಾರೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿಯೂ ಗ್ಯಾರಂಟಿ ಅಲೆಯನ್ನೇ ಅವರು ನೆಚ್ಚಿಕೊಂಡಿದ್ದಾರೆ. ಆದರೆ ಅದು ಕೆಲಸ ಮಾಡುವುದಿಲ್ಲ’ ಎಂದರು. 

ಸಿದ್ದರಾಮಯ್ಯ ಕೈಲಿಲ್ಲ ಪವರ್ ಸೆಂಟರ್‌:

‘ರಾಜ್ಯದಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈಯಲ್ಲಿ ಪವರ್‌ ಸೆಂಟರ್‌ ಇಲ್ಲ. ಭವಿಷ್ಯದ ಸಿಎಂ ಡಿ.ಕೆ. ಶಿವಕುಮಾರ ಮತ್ತು ಸಿ.ಎಂ. ಹುದ್ದೆ ಆಕಾಂಕ್ಷಿಗಳಾಗಿ ಕಾಯುತ್ತಿರುವ ಜಿ. ಪರಮೇಶ್ವರ ಮತ್ತು ಸತೀಶ್‌ ಜಾರಕಿಹೊಳಿ ಅವರ ಬಳಿ ಇದೆ. ಇವರ ನಡುವೆ ಒಳಗೊಳಗೆ ಪೈಪೋಟಿ ನಡೆಯುತ್ತಿದೆ. ಈ ಕಿತ್ತಾಟದಿಂದಾಗಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ’ ಎಂದು ಆರೋಪಿಸಿದರು.

‘ಸಹಜವಾಗಿಯೇ ಮುಖ್ಯಮಂತ್ರಿ ಆದವರು ಮುಂದಾಳತ್ವ ವಹಿಸಿಕೊಂಡು ಆಡಳಿತ ನಡೆಸಬೇಕು. ಆದರೆ, ರಾಜ್ಯದಲ್ಲಿ ಮಾತ್ರ ಹೀಗಾಗುತ್ತಿಲ್ಲ. ಸಿಎಂ ಹುದ್ದೆಯ ಆಕಾಂಕ್ಷಿಗಳು ಸಾಕಷ್ಟು ಜನ ಇರುವುದರಿಂದ ಆಡಳಿತದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ. ಜನರ ನೆಮ್ಮದಿಗೆ ಭಂಗ ಉಂಟಾಗಿದೆ ಎಂದು ಅಣ್ಣಾಮಲೈ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT