ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತುಂಗಾ, ಭದ್ರಾ ಜಲಾಶಯಗಳ ಸುರಕ್ಷತೆಗೆ ಒತ್ತು ಕೊಡಿ: ಕೆ.ಬಿ.ಪ್ರಸನ್ನಕುಮಾರ್

ಜೆಡಿಎಸ್ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ಬಿ.ಪ್ರಸನ್ನಕುಮಾರ್ ಒತ್ತಾಯ
Published : 14 ಆಗಸ್ಟ್ 2024, 14:35 IST
Last Updated : 14 ಆಗಸ್ಟ್ 2024, 14:35 IST
ಫಾಲೋ ಮಾಡಿ
Comments

ಶಿವಮೊಗ್ಗ: ತುಂಗಾ ಜಲಾಶಯದ 22 ಗೇಟ್‌ಗಳಲ್ಲಿ ಒಂದು ಗೇಟ್‌ನ ರೋಪ್ ಹಾಳಾಗಿದೆ. ಅದನ್ನು ಪರಿಶೀಲಿಸಿ ಮುಂದೆ ದೊಡ್ಡ ಮಟ್ಟದ ಅವಘಡ ಸಂಭವಿಸದಂತೆ ಸರ್ಕಾರ ಗಮನಹರಿಸಲಿ ಎಂದು ಜೆಡಿಎಸ್ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ಬಿ.ಪ್ರಸನ್ನಕುಮಾರ್ ಒತ್ತಾಯಿಸಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತುಂಗಾ ಜಲಾಶಯದಲ್ಲಿ ಈಗ ಸಾಕಷ್ಟು ಹೂಳು ಮತ್ತು ಮರಳು ಸಂಗ್ರಹವಾಗಿದೆ. ಇದರಿಂದ ನೀರಿನ ಸಂಗ್ರಹ ಕಡಿಮೆಯಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಕೂಡಲೇ ನೀರಾವರಿ ತಜ್ಞರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಹೂಳು ಮತ್ತು ಮರಳು ತೆಗೆಸುವಂತೆ ಆಗ್ರಹಿಸಿದರು.

ಹೊಸಪೇಟೆಯ ಟಿಬಿ ಡ್ಯಾಂನ ಗೇಟ್ ಕಳಚಿ ಬಿದ್ದು, ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ಅದೇ ರೀತಿ ಭದ್ರಾ ಜಲಾಶಯದಲ್ಲೂ ನೀರು ಸೋರಿಕೆಯಾಗುತ್ತಿದೆ. ಅದರ ಬಗ್ಗೆಯೂ ಸರ್ಕಾರ  ಗಮನಹರಿಸಬೇಕು ಎಂದರು.
 
ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ನಗರ ಘಟಕದ ಅಧ್ಯಕ್ಷ ದೀಪಕ್‌ಸಿಂಗ್, ಪ್ರಮುಖರಾದ ಸಿದ್ದಪ್ಪ, ಅಬ್ದುಲ್ ವಾಜಿದ್, ನರಸಿಂಹ ಗಂಧದಮನೆ, ಗೋಪಿ, ಜಯಣ್ಣ, ದಯಾನಂದ್, ಸಂಜಯ್ ಕಶ್ಯಪ್, ನಿಹಾಲ್, ಎಚ್.ಎಂ.ಸಂಗಯ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT