ಬುಧವಾರ, ಆಗಸ್ಟ್ 4, 2021
21 °C

ಹಗರಣದ ಪ್ರಸ್ತಾಪ ಗಾಳಿಯಲ್ಲಿ ಗುಂಡು ಹೊಡೆದಂತೆ: ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಪಿಪಿಇ ಕಿಟ್‌ ಸೇರಿದಂತೆ ಕೊರೊನಾ ನಿಯಂತ್ರಣ ಕಾರ್ಯದ ಪರಿಕರಗಳ ಖರೀದಿಯಲ್ಲಿ ಹಗರಣ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗಾಳಿಯಲ್ಲಿ ಗುಂಡು ಹೊಡೆಯುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಕುಟುಕಿದರು.

ನಗರದಲ್ಲಿ ಬುಧವಾರ ಪತ್ರಕರ್ತರ ಜತೆ ಅವರು ಮಾತನಾಡಿದರು.

ವಿರೋಧ ಪಕ್ಷದವರು ಸಕ್ರಿಯರಾಗಿದ್ದಾರೆ ಎಂದು ಖಚಿತ ಪಡಿಸಿಕೊಳ್ಳಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ದಾಖಲೆ ಇದ್ದರೆ ಬಿಡುಗಡೆ ಮಾಡಲಿ, ಆರೋಪ ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು.

ಆನ್‌ಲೈನ್‌ ಶಿಕ್ಷಣ ಕುರಿತು ಪರ, ವಿರೋಧ ಚರ್ಚೆಗಳು ನಡೆಯುತ್ತಿದೆ. ಯಾವ ಮಕ್ಕಳನ್ನೂ  ಶಿಕ್ಷಣದಿಂದ ವಂಚನೆ ಮಾಡಲಾಗುವುದಿಲ್ಲ. ಶಾಲೆಗೆ ಹೋದರೆ ಕೊರೊನಾ ವೈರಸ್‌ ತಗುಲುತ್ತದೆ  ಎಂಬ ಆತಂಕ ಪೋಷಕರಲ್ಲಿದೆ. ಹಾಗಾಗಿ, ಆನ್‌ಲೈನ್‌ ಶಿಕ್ಷಣ ಸೂಕ್ತ ಎಂದು ಅಭಿಪ್ರಾಯಪಟ್ಟರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು