ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಕಂಡ ಅಪರೂಪದ ರಾಜಕಾರಣಿ ಕಾಗೋಡು

ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಹೇಳಿಕೆ
Last Updated 12 ಸೆಪ್ಟೆಂಬರ್ 2021, 5:24 IST
ಅಕ್ಷರ ಗಾತ್ರ

ಸಾಗರ: ‘ಕಾಗೋಡು ರಾಜ್ಯ ಕಂಡ ಅಪರೂಪದ ರಾಜಕಾರಣಿ.ಬದುಕಿನುದ್ದಕ್ಕೂ ಜನಪರ ಕಾಳಜಿ ಇರಿಸಿಕೊಂಡು ಅದರಲ್ಲಿಯೇ ಸಂತೃಪ್ತಿ ಕಂಡ ಅವರು ನಮ್ಮಂತಹ ಯುವ ರಾಜಕಾರಣಿಗಳಿಗೆ ಮಾರ್ಗದರ್ಶಕರು’ ಎಂದು ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಹೇಳಿದರು.

ಕಾಗೋಡು ತಿಮ್ಮಪ್ಪ ಅವರ 90ನೇ ಜನ್ಮದಿನದ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿಕಾಗೋಡು ತಿಮ್ಮಪ್ಪ ಅವರನ್ನು ಸನ್ಮಾನಿಸಿ ಮಾತನಾಡಿದರು.

‘90ನೇ ವರ್ಷದ ಹುಟ್ಟುಹಬ್ಬ ಅವರ ಸಾರ್ಥಕ ಬದುಕಿಗೆ ಹಿಡಿದ ಕನ್ನಡಿ.ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ನಂತರ ಕಾಗೋಡು ತಿಮ್ಮಪ್ಪ ಅವರು ರಾಜಕೀಯವಾಗಿ, ಸಾಮಾಜಿಕವಾಗಿ ಛಾಪು ಮೂಡಿಸಿದ್ದಾರೆ. ಕಾಗೋಡು ತಿಮ್ಮಪ್ಪ ಶಾಸಕರು, ಸಚಿವರಾಗಿದ್ದಾಗ ನೀಡಿದ ಕೊಡುಗೆ ಅವಿಸ್ಮರಣೀಯ’ ಎಂದರು.

‘ಕಾಗೋಡು ಅಧಿಕಾರ ಅವಧಿಯಲ್ಲಿ ರಾಜ್ಯದ ಲಕ್ಷಾಂತರ ಕುಟುಂಬಗಳಿಗೆ ಭೂಮಿಹಕ್ಕು ಕೊಟ್ಟು, ಸ್ವಾವಲಂಬಿಗಳಾಗಲು ಅನುವು ಮಾಡಿಕೊಟ್ಟಿದ್ದಾರೆ.
ಸದಾ ಜನರ ಪರವಾಗಿ ಚಿಂತಿಸುವ ಅವರದ್ದು ಅನುಕರಣೀಯ ರಾಜಕೀಯ’ ಎಂದು ಬಣ್ಣಿಸಿದರು. ಕೆಪಿಸಿಸಿ ಕಾರ್ಯದರ್ಶಿ ಡಾ.ರಾಜನಂದಿನಿ ಕಾಗೋಡು, ನಗರ ಕಾಂಗ್ರೆಸ್ ಅಧ್ಯಕ್ಷ ಐ.ಎನ್. ಸುರೇಶಬಾಬು, ಪ್ರಮುಖರಾದ ಕೆ. ಹೊಳೆಯಪ್ಪ, ಅಣ್ಣಪ್ಪ ಭೀಮನೇರಿ, ಸೋಮಶೇಖರ ಲ್ಯಾವಿಗೆರೆ, ಎಲ್. ಚಂದ್ರಪ್ಪ, ಗಣಪತಿ ಮಂಡಗಳಲೆ, ಅಶೋಕ ಬೇಳೂರು, ರವಿ ಜಂಬೂರುಮನೆ, ದೀಪಾ ಕಾಗೋಡು, ರಮಲೋ ಕಾಗೋಡು ಹಾಜರಿದ್ದರು.

‘ದೇವರಾಜ ಅರಸು ಪ್ರಶಸ್ತಿ ನೀಡಿ’

‘ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರು ಭೂ ಸುಧಾರಣೆ ಕಾಯ್ದೆಯನ್ನು ಜಾರಿಗೆ ತರಲು ಪ್ರಮುಖ ಕಾರಣರಾಗಿರುವ ಕಾಗೋಡು ತಿಮ್ಮಪ್ಪ ಅವರಿಗೆ ರಾಜ್ಯ ಸರ್ಕಾರ ದೇವರಾಜ ಅರಸು ಪ್ರಶಸ್ತಿ ನೀಡಿ ಗೌರವಿಸಬೇಕು’ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಒತ್ತಾಯಿಸಿದರು.

‘ದೇವರಾಜ ಅರಸು ಅವರಿಂದ ಹಿಡಿದು ಸಿದ್ದರಾಮಯ್ಯ ಅವರವರೆಗೆ ಕಾಗೋಡು ತಿಮ್ಮಪ್ಪ ಅವರು ದೀರ್ಘಕಾಲ ರಾಜಕಾರಣದಲ್ಲಿದ್ದಾರೆ. ತುಳಿತಕ್ಕೆ ಒಳಗಾದ ಸಮುದಾಯಗಳಿಗೆ ನ್ಯಾಯ ಒದಗಿಸುವ ಕೆಲಸ ಮಾಡಿದ್ದು, ಭೂರಹಿತರಿಗೆ ಭೂಮಿಹಕ್ಕು ದೊರಕಲು ಕಾರಣವಾಗಿದ್ದಾರೆ. ಹೀಗಾಗಿ ಅವರು ಅರಸು ಪ್ರಶಸ್ತಿಗೆ ಸೂಕ್ತ ವ್ಯಕ್ತಿ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT