ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರನ್ನು ಪ್ರೋತ್ಸಾಹಿಸುವ ಕೆಲಸವಾಗಲಿ: ಕಾಗೋಡು ತಿಮ್ಮಪ್ಪ

ಮಾಜಿ ಸಚಿವ ಕಾಗೋಡು ತಿಮ್ಮಪ್ಪ
Published 21 ಸೆಪ್ಟೆಂಬರ್ 2023, 12:58 IST
Last Updated 21 ಸೆಪ್ಟೆಂಬರ್ 2023, 12:58 IST
ಅಕ್ಷರ ಗಾತ್ರ

ಆನಂದಪುರ: ಕೃಷಿಯಲ್ಲಿ ಸಾಧನೆ ಮಾಡುತ್ತಿರುವ ರೈತರನ್ನು ಗುರುತಿಸಿ ಸನ್ಮಾನಿಸುವ ಕೆಲಸವಾಗಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸಲಹೆ ನೀಡಿದರು.

ಸಮೀಪದ ಇರುವಕ್ಕಿಲ್ಲಿರುವ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ 11ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿಶ್ವವಿದ್ಯಾಲಯದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಉತ್ತಮ ಕೃಷಿ ಮಾಡುವವರನ್ನು, ತೋಟಗಾರಿಕಾ ಬೆಳೆಗಳಲ್ಲಿ ಹೆಚ್ಚು ಆದಾಯ ಪಡೆಯುತ್ತಿರುವವರನ್ನು ಗುರುತಿಸುವುದರಿಂದ ರೈತರಿಗೆ ವಿಶ್ವವಿದ್ಯಾಲಯದ ಬಗ್ಗೆ ಹೆಚ್ಚಿನ ಆಸಕ್ತಿ ಮೂಡುತ್ತದೆ. ಜೊತೆಗೆ ವಿಶ್ವವಿದ್ಯಾಲಯದೊಂದಿಗೆ ನಿರಂತರ ಸಂಪರ್ಕ ಹೊಂದಿ ಆದಾಯದ ದ್ವಿಗಣಕ್ಕೂ ಸಹಾಯವಾಗುತ್ತದೆ. ಪ್ರತಿವರ್ಷ ರೈತರನ್ನು ಕರೆಯಿಸಿ ಗೌರವಿಸುವ ಕೆಲಸವಾಗಬೇಕು ಎಂದು ಹೇಳಿದರು.

ಮಲೆನಾಡಿನ ರೈತರಿಗೆ ವೈಜ್ಞಾನಿಕ ಕೃಷಿ ಪದ್ಧತಿ ಬಗ್ಗೆ ಮಾಹಿತಿ ಇಲ್ಲ. ಇದರಿಂದ ಉತ್ತಮ ಬೆಳೆ ಬೆಳೆಯಲು ಸಾಧ್ಯವಾಗುತ್ತಿಲ್ಲ. ರೈತರಿಗೆ ತಿಂಗಳಿಗೊಮ್ಮೆ ಕಾರ್ಯಾಗಾರ ನಡೆಸಬೇಕು. ಈ ನಿಟ್ಟಿನಲ್ಲಿ ವಿಶ್ವವಿದ್ಯಾಲಯ ಕೆಲಸ ಮಾಡಬೇಕು ಎಂದು ಹೇಳಿದರು.

ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಧ್ಯಾಪಕರಿಗೆ ವಸತಿಗೃಹಗಳನ್ನು ನಿರ್ಮಿಸಲು ಮುಖ್ಯಮಂತ್ರಿ ಹಾಗೂ ಕೃಷಿ ಸಚಿವರನ್ನು ಸದ್ಯದಲ್ಲೇ ಭೇಟಿ ಮಾಡಿ ಕಾರ್ಯರೂಪಕ್ಕೆ ತರುವ ಕೆಲಸ ಮಾಡಲಾಗುವುದು ಎಂದು ಭರವಸೆ ನೀಡಿದರು.

ಕುಲಪತಿ ಆರ್‌.ಸಿ. ಜಗದೀಶ್ ಮಾತನಾಡಿ, ‘ವಿಶ್ವವಿದ್ಯಾಲಯವು ಹೊಸಪ್ರಯೋಗಗಳನ್ನು ಮಾಡುವ ಮೂಲಕ ರೈತರ, ವಿದ್ಯಾರ್ಥಿಗಳ ಏಳಿಗೆಗೆ ಶ್ರಮಿಸುತ್ತಿದೆ. ಇಲ್ಲಿಯವರೆಗೆ 3,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿವಿಧ ಪದವಿಗಳನ್ನು ಪ್ರದಾನ ಮಾಡಲಾಗಿದೆ. 70ಕ್ಕೂ ಹೆಚ್ಚು ಜನರು ಪಿಎಚ್.ಡಿ ಪದವಿ ಪಡೆದು ದೇಶದ ವಿವಿಧ ಭಾಗಗಳಲ್ಲಿ ಕೆಲಸ ಮಾಡುತ್ತಾ, ಕೃಷಿ ಕ್ಷೇತ್ರಕ್ಕೆ ತಮ್ಮ ಕೊಡುಗೆ ನೀಡುತ್ತಿದ್ದಾರೆ’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶರಣಪ್ಪ ದೇಶ್ ಮುಖ್, ಅತ್ಯುತ್ತಮ ಸಂಶೋಧನಾ ಪ್ರಶಸ್ತಿ ಪಡೆದ ಶ್ರೀಶರ್, ಅತ್ಯುತ್ತಮ ಕ್ಷೇತ್ರ ಅಧಿಕಾರಿ ಗಣಪತಿ. ಸೇವಾ ಸಿಬ್ಬಂದಿ ಪ್ರಶಸ್ತಿ ಪಡೆದ ಭಾಗ್ಯಲಕ್ಷಿ ಅವರನ್ನು ಸನ್ಮಾನಿಸಲಾಯಿತು. ಸಂಶೋಧನಾ ಲೇಖನ ಪ್ರಕಟಿಸಿದವರಿಗೆ ಅಭಿನಂದನಾ ಪತ್ರ ನೀಡಲಾಯಿತು.

ಆಡಳಿತ ಮಂಡಳಿ ಸದಸ್ಯರಾದ ದೊಡ್ಡಗೌಡ ಸಿ. ಪಾಟೀಲ್, ಕೆ.ನಾಗರಾಜ್, ವೀರಭದ್ರಪ್ಪ ಪೂಜಾರಿ, ಪಿ.ಕೆ.ಬಸವರಾಜ್, ಬಿ.ಕೆ.ಕುಮಾರಸ್ವಾಮಿ, ಎಂ.ದಿನೇಶ್ ಕುಮಾರ್ ಹಾಗೂ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT