ಭದ್ರಾವತಿ: ನಗರದ ಬಿ.ಎಚ್. ರಸ್ತೆ ಕಡದಕಟ್ಟೆಯಲ್ಲಿ ನಿರ್ಮಿಸಿರುವ ಕಾಲಭೈರವೇಶ್ವರ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ, ಸ್ಥಿತಿಬಿಂಬ ಪ್ರತಿಷ್ಠಾಪನೆ ಹಾಗೂ ದೀಪಸ್ಥಂಭ ಪ್ರತಿಷ್ಠಾಪನಾ ಕಾರ್ಯಕ್ರಮ ಭಾನುವಾರ ವಿಜೃಂಭಣೆಯಿಂದ ಜರುಗಿತು.

ಕಾಲಭೈರವೇಶ್ವರ ದೇವಸ್ಥಾನ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಗಂಗಾಪೂಜೆ, ಗೋಪೂಜೆ, ಆಲಯ ಪ್ರವೇಶ, ಪಂಚಾಮೃತ ಅಭಿಷೇಕ, ಅಲಂಕಾರ ಪ್ರತಿಷ್ಠಾಪನೆ, ಪೂರ್ಣಾಹುತಿ, ಕಷ್ಟವಧಾನ ಸೇವೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ಶಿವಮೊಗ್ಗ ಬೆಕ್ಕಿನ್ ಕಲ್ಮಠ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ, ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠದ ಮಾದಾರ ಚೆನ್ನಯ್ಯ ಸ್ವಾಮೀಜಿ, ಹೊಸದುರ್ಗ ಕಾಗಿನೆಲೆ ಮಹಾಸಂಸ್ಥಾನ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ, ಬಿಳಕಿ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಕಾಲಭೈರವೇಶ್ವರ ದೇವಸ್ಥಾನ ಮತ್ತು ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಲಕ್ಷ್ಮಣ್ ಗೌಡ ಅಧ್ಯಕ್ಷತೆ ವಹಿಸಿದ್ದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್ ಸುಂದರೇಶ್, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದಾ ಅಪ್ಪಾಜಿ, ವಿಧಾನಪರಿಷತ್ ಮಾಜಿ ಸದಸ್ಯ ಎಸ್. ರುದ್ರೇಗೌಡ, ಮುಖಂಡರಾದ ಎಸ್.ಎಸ್. ಜ್ಯೋತಿಪ್ರಕಾಶ್, ರಮೇಶ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ. ಶಿವಕುಮಾರ್, ಉದ್ಯಮಿ ಬಿ.ಕೆ ಜಗನ್ನಾಥ್, ಭಾರತಿ ರಾಮಕೃಷ್ಣ, ಅರ್ಚಕ ರಮೇಶ್ ಭಟ್ಟ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.