ಭಾನುವಾರ, ನವೆಂಬರ್ 29, 2020
25 °C

ಕರ್ನಾಟಕ ಬಂದ್‌: ಶಿವಮೊಗ್ಗ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ವಿವಿಧ ಸಂಘಟನೆಗಳು ಸೋಮವಾರ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ರೈತ ಸಂಘಗಳು, ಕನ್ನಡ ಪರ, ದಲಿತ ಸಂಘಟನೆಗಳು, ಪ್ರಗತಿಪರರು ಭಾರಿ ಸಂಖ್ಯೆಯಲ್ಲಿ ಬೀದಿಗಿಳಿದು ಪ್ರತಿಭಟಿಸಿದರು. ಹಲವೆಡೆ ರಸ್ತೆ ಸಂಚಾರ ತಡೆದರು. ಮಾನವ ಸರಪಳಿ ನಿರ್ಮಿಸಿದರು. ಕೇಂದ್ರ, ರಾಜ್ಯ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿದರು. ಬಂದ್‌ಗೆ ಬೆಂಬಲ ನೀಡಿದ್ದ ಕಾಂಗ್ರೆಸ್‌ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರೆ, ಜೆಡಿಎಸ್ ಕಾರ್ಯಕರ್ತರು ಬೈಕ್‌ ರ‍್ಯಾಲಿ ನಡೆಸಿದರು.

ಕೆಎಸ್‌ಆರ್‌ಟಿಸಿ ಬಸ್‌ಗಳು, ಆಟೊರಿಕ್ಷಾಗಳ ಸಂಚಾರ ಎಂದಿನಂತೆ ಇತ್ತು. ಖಾಸಗಿ ಬಸ್‌ಗಳು ವಿರಳವಾಗಿದ್ದವು. ಹಲವು ಅಂಗಡಿ, ಮುಂಗಟ್ಟುಗಳು ತೆರೆದಿದ್ದವು. ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು ಎಂದಿನಂತೆ ಕಾರ್ಯನಿರ್ವಹಿಸಿದರು. ಜನ ಸಂಚಾರ ವಿರಳವಾಗಿತ್ತು. 

ಪ್ರತಿಭಟನಾ ಮೆರವಣಿಗೆ ಸಾಗುವಾಗ ಬಾಗಿಲು ಮುಚ್ಚಿದ್ದ ವಾಣಿಜ್ಯ ಮಳಿಗೆಗಳು ನಂತರ ಬಾಗಿಲು ತೆರೆದವು. 

2 ಕಿ.ಮೀ ಸಾಲುಗಟ್ಟಿದ ವಾಹನಗಳು

ಶಿವಮೊಗ್ಗ ಸಮೀಪದ ಬೇಡರ‌ಹೊಸಹಳ್ಳಿ ಬಳಿ ನಡೆದ ಪ್ರತಿಭಟನೆಯಲ್ಲಿ ರಸ್ತೆ ಸಂಚಾರ ತಡೆ ಪರಿಣಾಮ ಹೊನ್ನಾಳಿ–ಶಿವಮೊಗ್ಗ ಮಧ್ಯೆ ಸಂಚರಿಸುವ ವಾಹನಗಳು 2 ಕಿ.ಮೀವರೆಗೆ ಸಾಲುಗಟ್ಟಿ ನಿಂತಿದ್ದವು. 11 ಜನರನ್ನ ಗ್ರಾಮಾಂತರ ಪೋಲೀಸರು ಬಂಧಿಸಿದ್ದಾ, ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು