ಸಾಗರ: ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆದಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಕಾಂಗ್ರೆಸ್ ಶಾಸಕರು ಅಭಿವೃದ್ಧಿಗೆ ಅನುದಾನ ತರುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಎಚ್.ಹಾಲಪ್ಪ ಹರತಾಳು ಆರೋಪಿಸಿದರು.

‘ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಪ್ರತಿದಿನ ಒಂದು ಹೇಳಿಕೆ, ಘೋಷಣೆ ಮಾಡುತ್ತಾರೆ. ಅವರು ಮಾಡುವ ಘೋಷಣೆಯ ಅನುಷ್ಠಾನಕ್ಕೆ ಹಣ ಎಲ್ಲಿದೆ ಎಂಬುದು ಯಾರಿಗೂ ಗೊತ್ತಿಲ್ಲ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

‘ರಾಜ್ಯದಲ್ಲಿ ಒಂದು ಸಾವಿರ ಕೆಪಿಎಸ್ ಶಾಲೆ ಸ್ಥಾಪಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಒಂದು ಶಾಲೆ ಆರಂಭಕ್ಕೆ ₹25 ಕೋಟಿ ಬೇಕು. ಒಂದು ಸಾವಿರ ಶಾಲೆಗೆ ₹ 25,000 ಕೋಟಿ ಬೇಕಾಗುತ್ತದೆ. ಈ ಹಣವನ್ನು ಅವರು ಎಲ್ಲಿಂದ ತರುತ್ತಾರೆ ಎಂಬುದನ್ನು ಸಾರ್ವಜನಿಕರಿಗೆ ಸ್ಪಷ್ಟಪಡಿಸಬೇಕು’ ಎಂದು ಒತ್ತಾಯಿಸಿದರು.

‘ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಹಲವು ದಶಕಗಳಿಂದ ಹಾಗೆ ಉಳಿದಿದೆ. ಕಳೆದ ವಿಧಾನಸಭೆ ಚುನಾವಣೆಗೆ ಮುನ್ನ ಇದೇ ವಿಷಯದ ಕುರಿತು ಮಧು ಬಂಗಾರಪ್ಪ ಅವರು ಆಯನೂರಿನಿಂದ ಶಿವಮೊಗ್ಗಕ್ಕೆ ಪಾದಯಾತ್ರೆ ನಡೆಸಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದರು. ಮೂರು ವರ್ಷವಾದರೂ ಆ ಸಮಸ್ಯೆ ಹಾಗೆಯೇ ಇದೆ’ ಎಂದು ದೂರಿದರು.

‘ಬಗರ್ ಹುಕುಂ ಸಮಸ್ಯೆ ಜಿಲ್ಲೆಯಲ್ಲಿ ಜೀವಂತವಾಗಿದೆ. ಯಾವುದೇ ಸ್ಪಷ್ಟ ನಿಲುವು ತಾಳಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಕಳೆದ ವಾರ ಅಕಾಲಿಕ ಮಳೆಯಿಂದ ಜಿಲ್ಲೆಯ ಹಲವೆಡೆ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ನಷ್ಟ ಅನುಭವಿಸಿದವರಿಗೆ ಪರಿಹಾರ ಕೊಡುವ ನಿಟ್ಟಿನಲ್ಲಿ ಯಾವುದೇ ಕೆಲಸವಾಗಿಲ್ಲ’ ಎಂದರು.

‘ಸಾಗರದ ಸರ್ಕಾರಿ ಆಸ್ಪತ್ರೆ ಅಭಿವೃದ್ಧಿಗೆ ₹70 ಕೋಟಿ ಅನುದಾನ ಬಂದಿದೆ ಎಂದು ಬೇಳೂರು ಹೇಳಿಕೆ ನೀಡಿದ್ದರು. ಆ ಹಣ ಎಲ್ಲಿ ಹೋಯಿತು ಎಂಬುದನ್ನು ಜನರಿಗೆ ಅವರು ತಿಳಿಸಬೇಕು’ ಎಂದು ಒತ್ತಾಯಿಸಿದರು.

‘ಹಸಿರುಮಕ್ಕಿ ಸೇತುವೆ ಉದ್ಘಾಟನೆ ಮೇ ತಿಂಗಳ ಅಂತ್ಯದೊಳಗೆ ಆಗುತ್ತದೆ ಎಂದು ಬೇಳೂರು ಭರವಸೆ ನೀಡಿದ್ದರು. ಆದರೆ ಯಾವ ವರ್ಷದ ಮೇ ತಿಂಗಳು ಎಂಬುದನ್ನು ಅವರು ಸ್ಪಷ್ಟಪಡಿಸಬೇಕು’ ಎಂದು ಆಗ್ರಹಿಸಿದರು.

ಬಿಜೆಪಿಯ ಪ್ರಮುಖರಾದ ದೇವೇಂದ್ರಪ್ಪ ಯಲಕುಂದ್ಲಿ, ಕೆ.ಆರ್.ಗಣೇಶ್ ಪ್ರಸಾದ್, ಮಲ್ಲಿಕಾರ್ಜುನ ಹಕ್ರೆ, ರಮೇಶ್ ಎಚ್.ಎಸ್., ಅರುಣ್ ಕುಗ್ವೆ, ಸುಜಯ್ ಶೆಣೈ, ಜಿ.ಕೆ.ಭೈರಪ್ಪ, ಪರಶುರಾಮ, ಸತೀಶ್, ಶ್ರೀಧರ ಜೋಗಿ, ಗಿರೀಶ್ ಗುಳ್ಳಳ್ಳಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-42-1904544284

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.