ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ | ಚುನಾವಣಾ ಜಾಹೀರಾತು; ಪೂರ್ವಾನುಮತಿ ಕಡ್ಡಾಯ

Published 7 ಮೇ 2023, 7:39 IST
Last Updated 7 ಮೇ 2023, 7:39 IST
ಅಕ್ಷರ ಗಾತ್ರ

ಶಿವಮೊಗ್ಗ: ವಿಧಾನಸಭಾ ಚುನಾವಣೆಯ ಮತದಾನ ಮೇ 10ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೇ 9 ಹಾಗೂ 10ರಂದು ಅಭ್ಯರ್ಥಿಗಳು, ಸಂಸ್ಥೆಗಳು ಅಥವಾ ಯಾವುದೇ ವ್ಯಕ್ತಿಯು ದಿನಪತ್ರಿಕೆಗಳಲ್ಲಿ ಯಾವುದೇ ರೀತಿಯ ಚುನಾವಣಾ ಜಾಹೀರಾತು ಪ್ರಕಟಿಸಬೇಕಾದರೆ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಯ (ಎಂಸಿಎಂಸಿ) ಕಡೆಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯ.

ಚುನಾವಣಾ ಜಾಹೀರಾತು ಪ್ರಕಟಿಸಲು ಬಯಸುವ ಅಭ್ಯರ್ಥಿಗಳು ಮೇ 9 ಹಾಗೂ 10 ರಂದು ಮುದ್ರಣ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟಿಸಬೇಕಾದರೆ ಸದರಿ ಜಾಹೀರಾತಿನ ಎರಡು ಸ್ವಯಂ ದೃಢೀಕೃತ ಪ್ರತಿಗಳೊಂದಿಗೆ ನಿಗದಿತ ಅರ್ಜಿ ನಮೂನೆಯಲ್ಲಿ ಮೇ 7ರೊಳಗೆ ಅರ್ಜಿ ಸಲ್ಲಿಸಬೇಕು.

ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಜಾಹೀರಾತು ಪ್ರಕಟಿಸಲು ಜಿಲ್ಲಾ ಮಟ್ಟದ ಎಂಸಿಎಂಸಿ ಕಡೆಯಿಂದ ಪೂರ್ವಾನುಮತಿ ಪಡೆಯದ ಅಭ್ಯರ್ಥಿಗಳ ಜಾಹೀರಾತು ಸ್ಥಳೀಯ, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದ ದಿನಪತ್ರಿಕೆಗಳು ಪ್ರಕಟಿಸಬಾರದು ಎಂದು ಚುನಾವಣಾ ಆಯೋಗ ತಿಳಿಸಿದೆ.

ಪೂರ್ವಾನುಮತಿಗೆ ಅರ್ಜಿ ಲಭ್ಯ: ಮೇ 9 ಹಾಗೂ 10ರಂದು ಮುದ್ರಣ ಮಾಧ್ಯಮದಲ್ಲಿ ಪ್ರಕಟಿಸಲು ಅಗತ್ಯವಿರುವ ನಿಗದಿತ ನಮೂನೆಯ ಅರ್ಜಿ ನಮೂನೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ, ಸರ್ ಎಂ.ವಿ. ರಸ್ತೆ, ಶಿವಮೊಗ್ಗ ಈ ಕಚೇರಿಯಿಂದ ಪಡೆಯಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT