ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ₹ 1 ಕೋಟಿ: ಬಿ.ಎಸ್.ಯಡಿಯೂರಪ್ಪ ಘೋಷಣೆ

ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ
Last Updated 26 ಅಕ್ಟೋಬರ್ 2020, 9:39 IST
ಅಕ್ಷರ ಗಾತ್ರ

ಶಿವಮೊಗ್ಗ:ಸೊರಬ ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಅವರ ಸ್ಮಾರಕ ನಿರ್ಮಿಸಲು ₹ 1ಕೋಟಿ ಅನುದಾನ ಬಿಡುಗಡೆ ಮಾಡಲು ಸೂಚಿಸಲಾಗಿದೆಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಬಂಗಾರಪ್ಪ ಅವರ 87ನೇ ಜನ್ಮ ಸ್ಮರಣೆ ಹಾಗೂ ಸೊರಬ ಪಟ್ಟಣದಲ್ಲಿ ₹ 21.15 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಉದ್ಯಾನವನ್ನು ಶಿವಮೊಗ್ಗದಿಂದ ಆನ್‍ಲೈನ್ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜಮುಖಿ ಚಿಂತನೆಯ ನಾಯಕ ಬಂಗಾರಪ್ಪ ಜಾರಿಗೊಳಿಸಿದ ಜನಪರ,ದೂರದೃಷ್ಟಿಯ ಯೋಜನೆಗಳ ಫಲವಾಗಿ ಜನಮಾನಸದಲ್ಲಿ ಇಂದಿಗೂ ಚಿರಸ್ಥಾಯಿಯಾಗಿದ್ದಾರೆ.ಶಿಕ್ಷಣ, ಆರೋಗ್ಯ, ಕೃಷಿ ಕ್ಷೇತ್ರದಲ್ಲಿ ಬಂಗಾರಪ್ಪ ಅವರು ತಂದ ದೂರದೃಷಿ ಯೋಜನೆಗಳು ಜನರ ಮನದಲ್ಲಿಇಂದಿಗೂ ಚಿರಸ್ಥಾಯಿಯಾಗಿ ಉಳಿದಿವೆ.ಕೃಷಿ ಕಾರ್ಮಿಕರು, ರೈತರು, ದೀನ ದಲಿತರು ಮತ್ತು ಗ್ರಾಮೀಣ ಜನತೆಯ ಅಭ್ಯುಧಯಕ್ಕಾಗಿ ನಿರಂತರವಾಗಿ ಶ್ರಮಿಸಿದ್ದರು ಎಂದು ಬಣ್ಣಿಸಿದರು.

ಕೋವಿಡ್ ಸಂಕಷ್ಟದಮಧ್ಯೆಯೂರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ರಾಜ್ಯದ ಎಲ್ಲಾಜಿಲ್ಲೆಗಳನ್ನೂಸಮಾನವಾಗಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆಎಂದರು.

ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ, ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯಿತಿಸಿಇಒಎಂ.ಎಲ್.ವೈಶಾಲಿ ಉಪಸ್ಥಿತರಿದ್ದರು.

ಸೊರಬ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ ಕುಮಾರ ಬಂಗಾರಪ್ಪ ಅಧ್ಯಕ್ಷತೆ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT