ಮಂಗಳವಾರ, ಡಿಸೆಂಬರ್ 7, 2021
23 °C

ಶಿವಮೊಗ್ಗ: ಗಾಂಜಾ ಹಾವಳಿ ನಿಯಂತ್ರಣಕ್ಕೆ ಎಸ್‌ಪಿಗೆ ಆಯನೂರು ಮಂಜುನಾಥ್‌ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಗಾಂಜಾ ಹಾವಳಿ ಸಂಪೂರ್ಣ ನಿಯಂತ್ರಿಸಬೇಕು. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಪತ್ರ ಬರೆದಿದ್ದಾರೆ.

ನಗರದ ಎಲ್ಲಾ ಕಡೆ ಗಾಂಜಾ ದೊರೆಯುತ್ತಿದೆ. ಗಾಂಜಾ ಹಾವಳಿ ಹೆಚ್ಚಾಗಿದೆ. ಶಾಲಾ ಕಾಲೇಜಿಗೆ ಹೋಗುವ ಯುವ ಸಮೂಹ ಮಾದಕ ಸೇವನೆಯಿಂದ ಜೀವನ ಹಾಳುಮಾಡಿಕೊಳ್ಳುತ್ತಿದ್ದಾರೆ. ನಗರದ ಕೃಷಿ ಕಾಲೇಜು ಸೇರಿದಂತೆ ಬಹುತೇಕ ಕಾಲೇಜುಗಳ ಸುತ್ತ ಗಾಂಜಾ  ವ್ಯಸನಿಗಳ ಹಾವಳಿ ಹೆಚ್ಚಾಗಿದೆ. ಗಾಂಜಾ ಮತ್ತಿನಿಂದ ದಾರಿಯಲ್ಲಿ ಓಡಾಡುವ ನಾಗರಿಕರ ಮೇಲೆ ಹಲ್ಲೆ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಗಾಂಜಾ ವ್ಯಸನಿಗಳಿಂದ ಈಚೆಗೆ ಶಾಂತಿಗೆ ಭಂಗವಾಗುತ್ತಿದೆ. ಪ್ರತಿ ಠಾಣಾ ವ್ಯಾಪ್ತಿಯಲ್ಲೂ ಸಬ್‌ಇನ್‌ಸ್ಪೆಕ್ಟರ್, ಸಿಬ್ಬಂದಿ ಗಸ್ತು ತಿರುಗಬೇಕು. ಗಾಂಜಾ ಮಾರಾಟ ಮಾಡುವ ವ್ಯಕ್ತಿಗಳನ್ನು ಪತ್ತೆ ಹಚ್ಚಿ, ತಡೆಗಟ್ಟಬೇಕು. ನಿರ್ಲಕ್ಷ್ಯ ಮಾಡುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಗಾಂಜಾ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೆಒಳ್ಳುವಂತೆ ಗೃಹಸಚಿವ ಅರಗ ಜ್ಞಾನೇಂದ್ರ ಅವರಿಗೂ ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು