ಸೋಮವಾರ, ಜುಲೈ 4, 2022
24 °C

ಹರ್ಷ ಹತ್ಯೆ: ಮತ್ತೆ ನಾಲ್ವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ಖಾಸಿಫ್‌, ಸೈಯ್ಯದ್‌ ನದೀಂ ಅವರನ್ನು ಬಂಧಿಸಿದ್ದ ಪೊಲೀಸರು ಮಂಗಳವಾರ ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಶಿವಮೊಗ್ಗ ಕ್ಲಾರ್ಕ್‌ ಪೇಟೆಯ ರಿಹಾನ್‌ ಶರೀಫ್‌, ಆಸಿಫ್‌ ಉಲ್ಲಾಖಾನ್‌, ಮುರಾದ್‌ನಗರದ ನಿಹಾನ್‌, ಟ್ಯಾಂಕ್‌ಮೊಹಲ್ಲಾದ ಅಬ್ದುಲ್‌ ಅಫಾನ್‌ ಬಂಧಿತ ಆರೋಪಿಗಳು. ಖಾಸಿಫ್‌ ಹೊರತುಪಡಿಸಿ, ಉಳಿದ ಎಲ್ಲ ಆರೋಪಿಗಳೂ 20 ರಿಂದ 22 ವಯಸ್ಸಿನ ಒಳಗಿನವರು.

‘ಹರ್ಷ ಹತ್ಯೆಗೆ ಸಂಬಧಿಸಿದಂತೆ 12 ಜನರನ್ನು ವಶಕ್ಕೆ ಪಡೆಯಲಾಗಿತ್ತು. ಅವರಲ್ಲಿ 6 ಆರೋಪಿಗಳು ಕೃತ್ಯದಲ್ಲಿ ಭಾಗಿಯಾಗಿರುವುದು ಮೇಲು ನೋಟಕ್ಕೆ ದೃಢಪಟ್ಟ ಕಾರಣ ಅವರನ್ನು ಬಂಧಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಮಾಹಿತಿ ನೀಡಿದರು.

ಇದನ್ನೂ ಓದಿ: ಬಜರಂಗ ದಳದ ಕಾರ್ಯಕರ್ತನ ಹತ್ಯೆ: ಮೂವರು ಆರೋಪಿಗಳ ಬಂಧನ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು