ಅಸಮಾಧಾನವಿದ್ದರೆ ಪಕ್ಷದ ವೇದಿಕೆಗಳಲ್ಲಿ ಚರ್ಚಿಸಲು ತಾಕೀತು
ಮುಖ್ಯಮಂತ್ರಿ ಬದಲಾವಣೆ ವಿಷಯ ಚರ್ಚಿಸಲು ಯತ್ನಾಳ ಯಾರು: ಅರುಣ್‌ಸಿಂಗ್ ಪ್ರಶ್ನೆ

ಶಿವಮೊಗ್ಗ: ಮುಖ್ಯಮಂತ್ರಿ ಬದಲಾವಣೆ ವಿಷಯ ಚರ್ಚಿಸಲು ಶಾಸಕ ಬಸನಗೌಡ ಪಾಟೀಲ ಯತ್ನಾಳ ಯಾರು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪ್ರಶ್ನಿಸಿದರು.
ಬಿಜೆಪಿ ವಿಶೇಷ ಸಭೆಯ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.
ರಾಜ್ಯ ಸರ್ಕಾರ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದೆ. ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಆದರೂ, ಮಾಧ್ಯಮಗಳಲ್ಲಿ ಇದೇ ವಿಷಯ ಚರ್ಚೆಯಾಗುತ್ತಿದೆ. ಇಂತಹ ವಿಷಯಗಳ ಕುರಿತು ಬೀದಿಗಳಲ್ಲಿ ಮಾತನಾಡಲು ಯತ್ನಾಳ್ ಯಾರು? ಎಲ್ಲರೂ ಅವರ ಪರಿಮಿತಿಯಲ್ಲೇ ಕೆಲಸ ಮಾಡಬೇಕು. ಸಮಸ್ಯೆ, ಅಸಮಾಧಾನವಿದ್ದರೆ ಪಕ್ಷದ ವೇದಿಕೆಗಳಲ್ಲಿ ಚರ್ಚಿಸಬೇಕು ಎಂದು ತಾಕೀತು ಮಾಡಿದರು.
ಇದನ್ನೂ ಓದಿ: ಬಿಎಸ್ವೈ ವಿರುದ್ಧ ಬಹಿರಂಗ ಹೇಳಿಕೆ ನೀಡಿದರೆ ಕಠಿಣ ಕ್ರಮ: ಬಿಜೆಪಿ ಎಚ್ಚರಿಕೆ
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.