ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಈಶ್ವರಪ್ಪ ಮನೆಗೆ ಮುತ್ತಿಗೆ ಯತ್ನ

Last Updated 15 ಏಪ್ರಿಲ್ 2022, 4:59 IST
ಅಕ್ಷರ ಗಾತ್ರ

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣ ಸಂಬಂಧ ಕೆ.ಎಸ್. ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಗುರುವಾರ ಮಲ್ಲೇಶ್ವರನಗರದ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ತೆರಳಿದ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರನ್ನು ರೈಲ್ವೇ ಕ್ರಾಸ್ ಬಳಿಯೇ ತಡೆದು ಪೊಲೀಸರು ಬಂಧಿಸಿ, ಬಿಡುಗಡೆಗೊಳಿಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಪಕ್ಷದ ಕಾರ್ಯಕರ್ತರು ವಾಹನಗಳಲ್ಲಿ ತೆರಳಿ ಹೊಳೆ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿ ಸಚಿವ ಈಶ್ವರಪ್ಪ ನಿವಾಸಕ್ಕೆ ತೆರಳಲು ಯತ್ನಿಸಿದಾಗ ಪೊಲೀಸರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಸೇರಿ 30ಕ್ಕೂ ಅಧಿಕ ಕಾರ್ಯಕರ್ತರನ್ನು ವಶಕ್ಕೆ ಪಡೆದು ಡಿಎಆರ್ ಮೈದಾನಕ್ಕೆ ಕರೆದೊಯ್ದರು.

ಬೆಳಿಗ್ಗೆಯಿಂದಲೇ ಈಶ್ವರಪ್ಪ ನಿವಾಸದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ಮಾತಿನ ಚಕಮಕಿ ನಡೆದು ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು. ಈಶ್ವರಪ್ಪ ಅವರ ವಿರುದ್ಧ ಎಫ್ಐಆರ್ ದಾಖಲಾಗಿರುವುದರಿಂದ ಅವರನ್ನು ಕೂಡಲೇ ಬಂಧಿಸಬೇಕು. ಸಂಪುಟದಿಂದ ಅವರನ್ನು ವಜಾಗೊಳಿಸಬೇಕೆಂದು ಪ್ರತಿಭಟನಕಾರರು ಘೋಷಣೆ ಕೂಗಿದರು.

ಕಾಂಗ್ರೆಸ್ ಮುಖಂಡರಾದ ಎಸ್.ಪಿ. ದಿನೇಶ್, ಎನ್. ರಮೇಶ್, ಇಕ್ಕೇರಿ ರಮೇಶ್, ಕೆ. ರಂಗನಾಥ್, ಮೋಹನ್, ಬಾಬು, ಚೇತನ್, ಲೋಕೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT