ಶಿವಮೊಗ್ಗ: ‘ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಈ ಭ್ರಷ್ಟ ಹಾಗೂ ಬೇಜವಾಬ್ದಾರಿ ಸರ್ಕಾರದ ವಿರುದ್ಧ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಈಗಾಗಲೇ ಹೋರಾಟ ನಡೆಸುತ್ತಿದ್ದಾರೆ. ಮುಂದಿನ ವಾರದಿಂದ ನಾನೂ ಬೀದಿಗಿಳಿದು ಹೋರಾಡುವೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು.

‘ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕಾಮಗಾರಿ ನಡೆಯುತ್ತಿಲ್ಲ. ಹಣ ಇಲ್ಲದೇ ರಸ್ತೆಯ ಸಣ್ಣ ಗುಂಡಿಯನ್ನೂ ಮುಚ್ಚಲು ಆಗುತ್ತಿಲ್ಲ. ಹೀಗಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾರಿ ಅಭಿವೃದ್ಧಿ ಮಾಡುತ್ತಿರುವುದಾಗಿ ಬೊಬ್ಬೆ ಹೊಡೆಯುತ್ತಿದ್ದಾರೆ’ ಎಂದು ಶುಕ್ರವಾರ ಸುದ್ದಿಗಾರರ ಎದುರು ಆಕ್ರೋಶ ವ್ಯಕ್ತಪಡಿಸಿದರು.

ಗಂಗಾವತಿ ಕ್ಷೇತ್ರದ ಉಪಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಪತ್ನಿ ಅರುಣಾ ಅವರು ಬಿಜೆಪಿ ಅಭ್ಯರ್ಥಿಯೇ ಎಂಬ ಪ್ರಶ್ನೆಗೆ, ‘ಆ ಬಗ್ಗೆ ನನಗೆ ಮಾಹಿತಿ ಇಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.