ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಸಂಘ: ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ

-
Published 20 ಜನವರಿ 2024, 20:54 IST
Last Updated 20 ಜನವರಿ 2024, 20:54 IST
ಅಕ್ಷರ ಗಾತ್ರ

ಶಿವಮೊಗ್ಗ: ಇಲ್ಲಿನ ಕರ್ನಾಟಕ ಸಂಘವು 2023ನೇ ಸಾಲಿನಲ್ಲಿ ಮೊದಲ ಮುದ್ರಣ ಆಗಿ ಪ್ರಕಟವಾದ ಕನ್ನಡ ಪುಸ್ತಕಗಳಿಗೆ ಬಹುಮಾನ ನೀಡಲು ಲೇಖಕರಿಂದ ಮತ್ತು ಪ್ರಕಾಶಕರಿಂದ ಕೃತಿಗಳನ್ನು ಆಹ್ವಾನಿಸಿದೆ.

ಕಾದಂಬರಿ, ಅನುವಾದ, ಮಹಿಳಾ ಸಾಹಿತ್ಯ, ಮುಸ್ಲಿಂ ಬರಹಗಾರರು, ಕವನ ಸಂಕಲನ, ಅಂಕಣ ಬರಹಗಾರರು, ಸಣ್ಣ ಕಥಾ ಸಂಕಲನ, ನಾಟಕ, ಪ್ರವಾಸ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಕ್ಕಳ ಸಾಹಿತ್ಯ ಹಾಗೂ ವೈದ್ಯ ಸಾಹಿತ್ಯ ಪ್ರಕಾರಗಳ ಪುಸ್ತಕಗಳಿಗೆ ಬಹುಮಾನ ನೀಡಲಾಗುತ್ತಿದೆ.

ಆಯ್ಕೆಯಾದ ಕೃತಿಗಳಿಗೆ ₹10,000 ನಗದು ಬಹುಮಾನ ಮತ್ತು ಫಲಕ ನೀಡಲಾಗುವುದು. ಸಂಬಂಧಿಸಿದ ಸಾಹಿತ್ಯ ಕೃತಿಗಳ ನಾಲ್ಕು ಪ್ರತಿಗಳನ್ನು 2024ರ ಮಾರ್ಚ್ 20ರ ಒಳಗಾಗಿ ಗೌರವ ಕಾರ್ಯದರ್ಶಿ, ಕರ್ನಾಟಕ ಸಂಘ, ಬಿ.ಎಚ್.ರಸ್ತೆ, ಶಿವಮೊಗ್ಗ–577201 ಇಲ್ಲಿಗೆ ಕಳುಹಿಸಿಕೊಡಲು ಕೋರಿದೆ. ಹೆಚ್ಚಿನ ಮಾಹಿತಿಗೆ ಕರ್ನಾಟಕ ಸಂಘದ ಕಚೇರಿ (08182–277406/9980159696) ಇಲ್ಲಿಗೆ ಸಂಪರ್ಕಿಸಲು ಕೋರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT