ಶಿವಮೊಗ್ಗ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.88.67 ಫಲಿತಾಂಶ ಪಡೆಯುವುದರೊಂದಿಗೆ ಶಿವಮೊಗ್ಗ ಜಿಲ್ಲೆಯು ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದೆ.

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆ ಕಳೆದ ವರ್ಷ 28ನೇ ಸ್ಥಾನ ಪಡೆದಿತ್ತು. ಈ ಬಾರಿ ಮೂರನೇ ಸ್ಥಾನಕ್ಕೆ ಬಡ್ತಿ ಪಡೆದು ಭರ್ಜರಿ ಸಾಧನೆ ಮಾಡಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ 23,028 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು, ಅವರಲ್ಲಿ 20,420 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶಿವಮೊಗ್ಗ ರಾಜ್ಯಮಟ್ಟದಲ್ಲಿ ಮೂರನೇ ಸ್ಥಾನ ಕೊಡಗು ಜಿಲ್ಲೆಯೊಂದಿಗೆ ಹಂಚಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.