ಸೋಮವಾರ, ಜೂನ್ 27, 2022
28 °C

ಕವಲೇದುರ್ಗ ಮಠದ ಸ್ವಾಮೀಜಿ ಲಿಂಗೈಕ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತೀರ್ಥಹಳ್ಳಿ: ಪ್ರಖರ ಮಾತುಗಾರಿಕೆ, ವಿಶೇಷ ಅಧ್ಯಯನದೊಂದಿಗೆ ಜೀವನ ಧರ್ಮದ ಪ್ರತಿಪಾದಕರಾಗಿದ್ದ ತಾಲ್ಲೂಕಿನ ಕವಲೇದುರ್ಗ ಭುವನಗಿರಿ ಸಂಸ್ಥಾನ ಮಹಾಮತ್ತಿನ ಮಠದ ಪೀಠಾಧಿಪತಿ ಡಾ.ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ (62) ಸೋಮವಾರ ಲಿಂಗೈಕ್ಯರಾದರು.

ಡಾ.ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಕೆಲ ದಿನಗಳಿಂದ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ವಿಪರೀತ ಶೀತ, ಜ್ವರದಿಂದ ಬಳಲುತ್ತಿದ್ದ ಶ್ರೀಗಳು 4 ದಿನಗಳ ಹಿಂದೆ ಪಟ್ಟಣದ ಜೆ.ಸಿ ಆಸ್ಪತ್ರೆಯಲ್ಲಿ 2 ದಿನ ಚಿಕಿತ್ಸೆ ಪಡೆದಿದ್ದರು. ಸೋಂಕು ಉಲ್ಬಣಗೊಂಡ ಕಾರಣ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ನಿಯಮಾವಳಿ ಅನ್ವಯ ಕವಲೇದುರ್ಗ ಮಠದ ಆವರಣದಲ್ಲಿ ಶ್ರೀಗಳ ಅಂತ್ಯ ಸಂಸ್ಕಾರ ಕಾರ್ಯ ನಡೆಯಿತು.

ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ರಡ್ಡೇರಹಟ್ಟಿ ಗ್ರಾಮದ ಶ್ರೀಗಳು 1959 ಜೂನ್ 1ರಂದು ಮಲ್ಲಯ್ಯ ಮಠದ್, ಗೌರಮ್ಮ ದಂಪತಿ ಪುತ್ರನಾಗಿ ಜನಿಸಿದ್ದರು. 1996ರಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಕವಲೇದುರ್ಗ ಭುವನಗಿರಿ ಸಂಸ್ಥಾನ ಮಹಾಮತ್ತಿನ ಮಠದ ಪೀಠಾಧಿಪತಿಗಳಾದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು