ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಫ್‌ಡಿ: ಒಂದೇ ದಿನ 13 ಮಂದಿಗೆ ಸೋಂಕು ದೃಢ

-
Published 5 ಫೆಬ್ರುವರಿ 2024, 18:58 IST
Last Updated 5 ಫೆಬ್ರುವರಿ 2024, 18:58 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ಹೆಚ್ಚಳಗೊಂಡಿದೆ. ಕಳೆದ 24 ಗಂಟೆಗಳಲ್ಲಿ ಹೊಸನಗರ ಹಾಗೂ ತೀರ್ಥಹಳ್ಳಿ ತಾಲ್ಲೂಕಿನ 13 ಜನರಲ್ಲಿ ಸೋಂಕು ದೃಢಪಟ್ಟಿದೆ. 

ಹೊಸನಗರ ತಾಲ್ಲೂಕಿನ ಮಾರುತಿಪುರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಮಾರುತಿಪುರ, ಮಳವಳ್ಳಿ, ಹೊಸ್ಕೆರೆ, ಕೇಶವಪುರ, ವಿಜಯಪುರ, ಮಾವಿನಹೊಳೆಯ 8 ಜನರಿಗೆ, ಸಂಪೆಕಟ್ಟೆಯ ಇಬ್ಬರಿಗೆ ಸೋಂಕು ತಗುಲಿರುವುದು ಖಾತರಿಯಾಗಿದೆ.

ಈ ಎಲ್ಲರನ್ನೂ ಸಾಗರದ ವಿಭಾಗೀಯ ಅಸ್ಪತ್ರೆಗೆ ದಾಖಲಿಸಲಾಗಿದೆ. ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು, ಗುಡ್ಡೆಕೊಪ್ಪ ಹಾಗೂ ಎಡಬಟ್ಟಿಯ ತಲಾ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇವರಿಗೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

‘ಎಲ್ಲರ ಆರೋಗ್ಯ ಸ್ಥಿರವಾಗಿದೆ. ಸಂಪೆಕಟ್ಟೆಯ 72 ವರ್ಷದ ವೃದ್ಧರೊಬ್ಬರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆನೀಡಲಾಗುತ್ತಿದೆ’ ಎಂದು ಡಿಎಚ್‌ಒ ರಾಜೇಶ ಸುರಗಿಹಳ್ಳಿ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT