ಶುಕ್ರವಾರ, ಆಗಸ್ಟ್ 12, 2022
24 °C
ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಬಿಡುವು: ಜಲಾಶಯಗಳ ಮಟ್ಟ ಏರಿಕೆ

ಮಳೆ ಆರ್ಭಟ: ಆ.30 ರವರೆಗೆ ಕೊಲ್ಲೂರು ಘಾಟಿ ಸಂಚಾರ ಬಂದ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಶುಕ್ರವಾರ ಮಳೆ ಕೊಂಚ ಬಿಡುವು ನೀಡಿದೆ. ಹೊಸನಗರದ ನಗರ, ತೀರ್ಥಹಳ್ಳಿಯ ಆಗುಂಬೆ ಪ್ರದೇಶಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ.

ಸಾಗರ, ಭದ್ರಾವತಿ, ಶಿವಮೊಗ್ಗ, ಶಿಕಾರಿಪುರ, ಸೊರಬ ತಾಲ್ಲೂಕಿನಲ್ಲಿ ಸಾಧಾರಣ ತುಂತುರು ಮಳೆಯಾಗಿದೆ.

ಹೊಸನಗರ ತಾಲ್ಲೂಕು ನಾಗೋಡಿ ಬಳಿ ರಸ್ತೆ ಕುಸಿದಿದ್ದು, ತ್ವರಿತ ಕಾಮಗಾರಿ ಕೈಗೊಳ್ಳಲು ಅನುವಾಗುವಂತೆ ಆ.30ರವರೆಗೆ ಕೊಲ್ಲೂರು ಘಾಟಿ ಸಂಚಾರ ನಿರ್ಬಂಧಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ಶೃಂಗೇರಿ ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿರುವ ಕಾರಣ ತುಂಗಾ ಜಲಾಶಯಕ್ಕೆ 31,277 ಕ್ಯುಸೆಕ್‌ ನೀರು ಹರಿದು ಬರುತ್ತಿದೆ. ಅಷ್ಟೇ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ. ಇದರಿಂದ ಶಿವಮೊಗ್ಗ ನಗರದ ಬಳಿ ತುಂಗಾ ನದಿ ತುಂಬಿ ಹರಿಯುತ್ತಿದೆ. ತೀರ್ಥಹಳ್ಳಿಯ ರಾಮಮಂಟಪ ಮುಳುಗಲು ನಾಲ್ಕು ಅಡಿ ಬಾಕಿ ಇದೆ. 24 ಗಂಟೆಗಳ ಅವಧಿಯಲ್ಲಿ ಭದ್ರಾ ಜಲಾಶಯದ ನೀರಿನ ಮಟ್ಟ 2.6 ಅಡಿ ಹಾಗೂ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 2.20 ಅಡಿ ಏರಿಕೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು