ಕೋಣಂದೂರು: ಹೋಬಳಿ ಕೇಂದ್ರದ ವ್ಯಾಪ್ತಿಯಲ್ಲಿ ಪಡಿತರ ಅಕ್ಕಿ ವಿತರಣೆಗೆ ಸರ್ವರ್ ಸಮಸ್ಯೆ ಇರುವುದರಿಂದ ಪಡಿತರ ಕಾರ್ಡ್ದಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಮೇ ಮತ್ತು ಜೂನ್ ತಿಂಗಳ ಬೆರಳಚ್ಚು ತೆಗೆದುಕೊಳ್ಳಲು ಸಾಕಷ್ಟು ಸಮಯ ಹಿಡಿಯುತ್ತದೆ. ಅಲ್ಲದೆ ಸರ್ವರ್ ಇಲ್ಲದಿರುವುದರಿಂದ 1 ಗಂಟೆಗೆ ಗರಿಷ್ಠ 2–3 ಕಾರ್ಡ್ದಾರರಿಗೆ ಮಾತ್ರ ಪಡಿತರ ವಿತರಿಸಲು ಸಾಧ್ಯವಾಗುತ್ತಿದೆ.

ಮಳೆ– ಗುಡುಗು ಪ್ರಾರಂಭವಾದರೆ ನೆಟ್ವರ್ಕ್ ಸಮಸ್ಯೆಯಾಗಲಿದ್ದು, ಯಾರಿಗೂ ಅಕ್ಕಿ ಸಿಗುವುದಿಲ್ಲ. ಆದ್ದರಿಂದ ಬೆಳಿಗ್ಗೆಯಿಂದ ತಡರಾತ್ರಿ 10ರವರೆಗೆ ಕಾದು ಕುಳಿತುಕೊಳ್ಳುವಂತಾಗಿದೆ. ಅಷ್ಟು ಹೊತ್ತು ಕಾದರೂ ಪ್ರತಿ ವ್ಯಕ್ತಿಗೆ ಕೇವಲ 5 ಕೆ.ಜಿ. ಅಕ್ಕಿ ಸಿಗುತ್ತದೆ.

ಈ ಬಗ್ಗೆ ಆಹಾರ ಇಲಾಖೆಯವರನ್ನು ಸಂಪರ್ಕಿಸಿದರೆ ಸರ್ವರ್ ಸಮಸ್ಯೆ ಇರುವುದು ನಿಜ. ಆದ್ದರಿಂದ ಸಮಯವನ್ನು ಬೆಳಿಗ್ಗೆ 6ರಿಂದ ರಾತ್ರಿ 10ರವರೆಗೆ ವಿಸ್ತರಿಸಲಾಗಿದೆ ಎನ್ನುತ್ತಾರೆ. ಗ್ರಾಮೀಣ ಭಾಗದ ಕೂಲಿಕಾರರು ಬೆಳಿಗ್ಗೆಯಿಂದ ರಾತ್ರಿವರೆಗೆ ತಮ್ಮ ಕೆಲಸ ಕಾರ್ಯ ಬಿಟ್ಟು ಕಾಯುವುದು, ನಂತರ 10– 15 ಕಿ.ಮೀ. ದೂರದ ಮನೆಗೆ ತೆರಳುವುದು ಸುಲಭದ ವಿಷಯವಲ್ಲ. ಸಂಬಂಧಪಟ್ಟ ಅಧಿಕಾರಿಗಳು ಅತ್ಯಂತ ಸರಳ ವಿಧಾನದ ಮೂಲಕ ಅಕ್ಕಿ ವಿತರಣೆಗೆ ಮುಂದಾಗಬೇಕು.

– ಗ್ರಾಮಸ್ಥರು, ಹುಂಚದಕಟ್ಟೆ ಪಡಿತರ ಕಾರ್ಡ್ದಾರರು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-42-40881275

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.