ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರು ತಿಂಗಳಲ್ಲಿ ಶಿವಮೊಗ್ಗ ಸಂಪೂರ್ಣ ಗಾಂಜಾ ಮುಕ್ತಗೊಳಿಸಲು ಈಶ್ವರಪ್ಪ ಸೂಚನೆ

Last Updated 16 ಸೆಪ್ಟೆಂಬರ್ 2020, 13:55 IST
ಅಕ್ಷರ ಗಾತ್ರ

ಶಿವಮೊಗ್ಗ: ಮೂರು ತಿಂಗಳ ಅವಧಿಯಲ್ಲಿ ಜಿಲ್ಲೆಯನ್ನು ಸಂಪೂರ್ಣ ಗಾಂಜಾ ಮುಕ್ತ ಮಾಡಬೇಕು. ಆಮಿಷಗಳಿಗೆ ಒಳಗಾಗದೆತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರಮಾದಕ ವಸ್ತುಗಳ ನಿಯಂತ್ರಣ ಕುರಿತು ಆಯೋಜಿಸಲಾಗಿದ್ದ ವಿವಿಧ ಇಲಾಖೆಗಳಅಧಿಕಾರಿಗಳು, ಪ್ರಾಂಶುಪಾಲರು ಹಾಗೂ ಜನಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಮಾದಕ ವಸ್ತುಗಳ ಬಳಕೆ ಎಲ್ಲೆಡೆ ಹೆಚ್ಚಾಗಿದೆ.ಕಠಿಣ ಕ್ರಮಗಳ ಮೂಲಕ ಕಡಿವಾಣಹಾಕದಿದ್ದರೆನಮ್ಮ ಮನೆಯ ಮಕ್ಕಳೇ ವ್ಯಸನಿಗಳಾಗುವ ಅಪಾಯವಿದೆ. ಜಿಲ್ಲೆಯ ಪೊಲೀಸರು ಮಾದಕ ವಸ್ತುಗಳ ನಿಯಂತ್ರಣಕ್ಕೆ ಇದುವರೆಗೂ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಇನ್ನಷ್ಟು ಕ್ರಮ ಕೈಗೊಂಡು ಸಂಪೂರ್ಣ ನಿಯಂತ್ರಿಸಬೇಕು. ಕರ್ತವ್ಯ ಲೋಪ ಎಸಗುವ ಪೊಲೀಸರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಮಾತನಾಡಿ,ಮಾದಕ ವಸ್ತುಗಳ ನಿಯಂತ್ರಣಕ್ಕೆ ಮೂರು ವರ್ಷಗಳಿಂದ ನಿರಂತರ ಕ್ರಮ ಕೈಗೊಳ್ಳಲಾಗಿದೆ. ಪ್ರತಿ ಶಾಲಾ, ಕಾಲೇಜುಗಳ ವ್ಯಾಪ್ತಿಯಲ್ಲಿ ಪೊಲೀಸರು, ಶಾಲಾ–ಕಾಲೇಜು ಮುಖ್ಯಸ್ಥರನ್ನುಒಳಗೊಂಡ ಸಮನ್ವಯ ಸಮಿತಿ ರಚಿಸಲಾಗಿದೆ. ಶಾಲಾ, ಕಾಲೇಜು ಆವರಣದ ಸುತ್ತಮುತ್ತಲಿನ ಅಂಗಡಿಗಳ ಮೇಲೆ ನಿರಂತರ ನಿಗಾ ವಹಿಸಲಾಗುತ್ತಿದೆ ಎಂದುಮಾಹಿತಿ ನೀಡಿದರು.

ಎಂಟು ತಿಂಗಳಲ್ಲಿ 58 ಪ್ರಕರಣಗಳನ್ನು ದಾಖಲಿಸಲಾಗಿದೆ.137 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 120 120 ಕೆ.ಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.ಮಾದಕ ವಸ್ತುಗಳ ಕುರಿತು ಮಾಹಿತಿ ದೊರೆತರೆ ನೇರವಾಗಿ ತಮ್ಮ ಮೊಬೈಲ್ 94808 03301ಗೆ ಮಾಹಿತಿ ನೀಡಬಹುದು. ಮಾಹಿತಿ ನೀಡಿದರಗೌಪ್ಯತೆ ಕಾಪಾಡಲಾಗುವುದುಎಂದುಭರವಸೆ ನೀಡಿದರು.

ಶಾಲೆಗಳಲ್ಲಿ ಮಕ್ಕಳ ಮನೋಸ್ಥೈರ್ಯ ಹೆಚ್ಚಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು.ಮಾದಕ ವಸ್ತುಗಳ ಬಳಕೆಕುರಿತು ಅ ರಿವು ಕಾರ್ಯಕ್ರಮ ಆಯೋಜಿಸಬೇಕು. ನಗರದ ಉದ್ಯಾನವನಗಳು ಮಾದಕ ವ್ಯಸನಿಗಳ ಅಡ್ಡೆಯಾಗುತ್ತಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಗ್ರಾಮಾಂತರ ಪ್ರದೇಶಗಳಲ್ಲೂ ಗಮನ ಹರಿಸಬೇಕು ಎಂದು ಪ್ರಾಂಶುಪಾಲರು, ಜನಪ್ರತಿನಿಧಿಗಳು ಸಲಹೆ ನೀಡಿದರು.

ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಅಪರ ಜಿಲ್ಲಾಧಿಕಾರಿ ಜಿ.ಅನುರಾಧಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT