ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ | ಎಲ್ಲ ಗ್ರಾಮಗಳಿಗೂ ಸಮರ್ಪಕ ಕುಡಿಯುವ ನೀರು

ಪ್ರೆಸ್‌ಟ್ರಸ್ಟ್‌ ಸಂವಾದ ಕಾರ್ಯಕ್ರಮದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಅಭಿಮತ
Last Updated 27 ಮೇ 2020, 19:30 IST
ಅಕ್ಷರ ಗಾತ್ರ

ಶಿವಮೊಗ್ಗ: ರಾಜ್ಯದ ಯಾವ ಗ್ರಾಮಗಳಲ್ಲೂಕುಡಿಯುವ ನೀರಿನ ಸಮಸ್ಯೆತಲೆದೋರದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಮನೆಮನೆಗೂ ನೀರು ತಲುಪಿಸುವ ವ್ಯವಸ್ಥೆ ಆರಂಭಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಶಿವಮೊಗ್ಗ ಪ್ರೆಸ್‌ಟ್ರಸ್ಟ್ ಬುಧವಾರ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಸ್ತುತ ವರ್ಷ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ರಾಜ್ಯದ 49 ಬರಪೀಡಿತ ತಾಲ್ಲೂಕುಗಳಿಗೆ ತಲಾ ₹ 1ಕೋಟಿ ನೀಡಲಾಗಿದೆ. ಉಳಿದ ತಾಲ್ಲೂಕುಗಳಿಗೆ ₹ 50 ಲಕ್ಷಬಿಡುಗಡೆ ಮಾಡಲಾಗಿದೆ. ಎಲ್ಲೂ ಸದ್ಯ ತೀವ್ರ ಸಮಸ್ಯೆ ಇಲ್ಲ. ಸಮಸ್ಯೆ ಕಂಡು ಬಂದರೆ ತಕ್ಷಣ ಕ್ರಮ ಕೈಗೊಳ್ಳಲು ಗ್ರಾಮ ಪಂಚಾಯಿತಿಗಳಿಗೆ ಸೂಚಿಸಲಾಗಿದೆ ಎಂದರು.

ಕೊರೊನಾ ಸಂಕಷ್ಟದ ಸಮಯದಲ್ಲಿ ಉದ್ಯೋಗ ಖಾತ್ರಿ ಗ್ರಾಮೀಣ ಪ್ರದೇಶದ ಬಡವರಿಗೆ, ಕೂಲಿ ಕಾರ್ಮಿಕರಿಗೆ ವರದಾನವಾಗಿದೆ. ಒಂದೇ ದಿನ 9.26 ಲಕ್ಷ ಜನರು ಖಾತ್ರಿ ಕೆಲಸಕ್ಕೆ ಹಾಜರಾಗಿದ್ದಾರೆ. ಕೂಲಿ ₹ 275ಕ್ಕೆ ಹೆಚ್ಚಿಸಲಾಗಿದೆ. ಕೆಲಸದ ಅವಧಿ 100 ದಿನಗಳಿಂದ 150ಕ್ಕೆ ಹೆಚ್ಚಿಸಲಾಗಿದೆ. ಚುನಾಯಿತ ಪ್ರತಿನಿ‌ಧಿಗಳು, ಸರ್ಕಾರಿ ನೌಕರರು, ಆದಾಯ ತೆರಿಗೆ ಸಲ್ಲಿಸುವ ವರ್ಗ ಹೊರತುಪಡಿಸಿ ಎಲ್ಲರಿಗೂ ಉದ್ಯೋಗ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಈಗಾಗಲೇ ₹ 1 ಸಾವಿರ ಕೋಟಿ ನೀಡಿದೆ ಎಂದು ವಿವರ ನೀಡಿದರು.

ಈ ಯೋಜನೆ ರೈತರಿಗೂವರದಾನವಾಗಿದೆ. ಸಣ್ಣ, ಅತಿಸಣ್ಣ ರೈತರು ಹೊಲಗಳಲ್ಲಿಯೇ ಇಂಗು ಗುಂಡಿ ನಿರ್ಮಿಸಲು,ಬಾಳೆ, ದಾಳಿಂಬೆ, ಅಡಿಕೆ ಮತ್ತಿತರ ತೋಟಗಾರಿಕೆ ಬೆಳೆ ಬೆಳೆಯಲು, ಮೀನು ಸಾಕಾಣಿಕೆಗೆ ಅವಕಾಶಮಾಡಿಕೊಡಲಾಗಿದೆ. ಬದುಗಳ ನಿರ್ಮಾಣ, ಕೆರೆಗಳ ಹೂಳೆತ್ತುವುದು, ಪುಷ್ಕರಣಿಗಳ ನಿರ್ಮಾಣಕ್ಕೂ ಅವಕಾಶವಿದೆ. ಜತೆಗೆ, ಇಡೀ ರಾಜ್ಯಕ್ಕೆಅಂತರ್ಜಲ ಚೇತನ ಕಾರ್ಯಕ್ರಮ ವಿಸ್ತರಿಸಲಾಗುತ್ತಿದೆಎಂದರು.

ನಗರದಲ್ಲಿ ಅಭಿವೃದ್ಧಿಚಟುವಟಿಕೆಗಳು ಮುಂದುವರಿದಿವೆ. ಚರಂಡಿ, ರಸ್ತೆ ಕಾಮಗಾರಿಗಳು ಚುರುಕುಗೊಂಡಿವೆ. ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಹಲವುಕಾಮಗಾರಿಗಳುಆರಂಭವಾಗಿವೆ.

ಪುರಲೆಯಲ್ಲಿ ಕೊಳಚೆನೀರು ಶುದ್ಧೀಕರಣಘಟಕ, ಪಾರ್ಕ್‌ಗಳ ಅಭಿವೃದ್ದಿ, ಸರ್ಕಾರಿಶಾಲೆಗಳ ದುರಸ್ತಿ, ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ, ರಾಜಕಾಲುವೆ ಒತ್ತುವರಿ ತೆರವುಗೊಳಿಸುವುದುಮತ್ತಿತರ ಕಾಮಗಾರಿಕೈಗೆತ್ತಿಕೊಳ್ಳಲಾಗಿದೆ. ಕೇಂದ್ರಸರ್ಕಾರದಬಹುದೊಡ್ಡ ‘ಮನೆ ಮನೆಗೆ ಗಂಗೆ’ ಯೋಜನೆಗೆ ಶೀಘ್ರ ಚಾಲನೆ ನೀಡಲಾಗುವುದು.ಈಗಾಗಲೇ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಮೂಲಕ ಹಳ್ಳಿಗಳಿಗೆ ನೀರು ಬಂದಿದೆ. ಈ ನೀರನ್ನು ನಲ್ಲಿಗಳ ಮೂಲಕ ತಲುಪಿಸುವ ಯೋಜನೆಯೇ ಮನೆಮನೆ ಗಂಂಗಾ ಎಂದು ವಿವರಿಸಿದರು.

ತುಂಗಾ ನದಿಗೆ ನಗರದ ಕೊಳೆಚೆ ನೀರು ಹರಿಸುವುದಕ್ಕೆ ಸಂಪೂರ್ಣ ಕಡಿವಾಣ ಹಾಕಲಾಗುವುದು. ಕೊಳಚೆ ನೀರು ಸಂಸ್ಕರಣಾ ಘಟಕಗಳ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು.ಯುಜಿಡಿ ವ್ಯವಸ್ಥೆಕಡ್ಡಾಯಗೊಳಿಸಲಾಗುವುದು ಎಂದರು.

ಈ ಸಮಯದಲ್ಲಿ ಉದ್ಯೋಗ ಖಾತ್ರಿ ಯೋಜನೆ ಪೋಸ್ಟರ್‌ಗಳನ್ನು ಸಚಿವಕೆ.ಎಸ್.ಈಶ್ವರಪ್ಪ, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ ಬಿಡುಗಡೆ ಮಾಡಿದರು.ಪ್ರೆಸ್‌ಟ್ರಸ್ಟ್‌ಅಧ್ಯಕ್ಷ ಎನ್.ಮಂಜುನಾಥ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT