ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಿಗ್ವಿಜಯ ಸಿಂಗ್, ಸಿದ್ದರಾಮಯ್ಯ, ಜಮೀರ್ ಪಾಕಿಸ್ತಾನ ಪರ ವ್ಯಕ್ತಿಗಳು: ಈಶ್ವರಪ್ಪ

ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ
Last Updated 14 ಜೂನ್ 2021, 3:40 IST
ಅಕ್ಷರ ಗಾತ್ರ

ಶಿವಮೊಗ್ಗ: ದಿಗ್ವಿಜಯ ಸಿಂಗ್, ಸಿದ್ದರಾಮಯ್ಯ, ಜಮೀರ್ ಅಹಮ್ಮದ್ ಪಾಕಿಸ್ತಾನದ ಪರವಾಗಿರುವ ವ್ಯಕ್ತಿಗಳು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಮ್ಮು ಕಾಶ್ಮೀರದಲ್ಲಿ ಮುಂಚೆ ಹೇಗಿತ್ತೋ ಹಾಗೇ ಮಾಡುತ್ತೇವೆ ಎಂದುದಿಗ್ವಿಜಯ ಸಿಂಗ್ ಹೇಳುತ್ತಾರೆ. ಗೋವನ್ನೂ ಪೂಜಿಸುತ್ತೇವೆ, ವಯಸ್ಸಾದ ಗೋವನ್ನು ಹತ್ಯೆ ಮಾಡಿದರೆ ತಪ್ಪೇನು ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಸಿದ್ದರಾಮಯ್ಯ ಹೇಳಿಕೆಯನ್ನು ಬೆಂಬಲಿಸುತ್ತೇನೆ ಎಂದು ಜಮೀರ್ ಅಹ್ಮದ್ ಹೇಳುತ್ತಾರೆ. ಈ ಮೂವರು ಪಾಕಿಸ್ತಾನ ಪರ ವ್ಯಕ್ತಿಗಳು. ಕಾಂಗ್ರೆಸ್ ಪಕ್ಷದಲ್ಲಿ ಯಾರು ಏನು ಬೇಕಾದರೂ ಹೇಳಿಕೆ ನೀಡಬಹುದು. ಹೇಳೋರು, ಕೇಳೋರು ಇಲ್ಲದ ಪಕ್ಷ’ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

‘ಬಿಜೆಪಿ ಹೇಳೋರು, ಕೇಳೋರು ಇರುವ ಪಕ್ಷ. ಈಗಿನ ಬೆಳೆವಣಿಗೆ ಬಗ್ಗೆ ಕಾರ್ಯಕರ್ತರಲ್ಲಿ ಕೆಲ ಗೊಂದಲಗಳಿವೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್ ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಭೇಟಿಯ ಬಳಿಕ ಪಕ್ಷದ ಎಲ್ಲ ಗೊಂದಲಗಳಿಗೆ ತೆರೆ ಬೀಳಲಿದೆ’ ಎಂದು ತಿಳಿಸಿದರು.

‘ಬಿಜೆಪಿಯಲ್ಲಿ ಸಹಿ ಸಂಗ್ರಹ ಪದ್ಧತಿ ಇಲ್ಲ. ರೇಣುಕಾಚಾರ್ಯ, ಸಿ.ಪಿ.ಯೋಗೇಶ್ವರ ಅವರಿಗೆ ಸಹಿಸಂಗ್ರಹ ಮಾಡಬಾರದು. ನಾಯಕತ್ವ ಬದಲಾವಣೆಯ ಕುರಿತು ಯಾರೂ ಬಹಿರಂಗ ಹೇಳಿಕೆ ನೀಡಬಾರದು ಎಂದು ಪಕ್ಷದ ವರಿಷ್ಠರು ತಿಳಿಸಿದ್ದಾರೆ. ಪಕ್ಷದ ಚೌಕಟ್ಟಿನಲ್ಲಿ ನಿಮ್ಮ ಅಭಿಪ್ರಾಯ ತಿಳಿಸಿ ಎಂದಿದ್ದಾರೆ. ಅದರಂತೆ ನಡೆದುಕೊಳ್ಳುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT