ಶಿವಮೊಗ್ಗ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪುರ್ಣ ಬಹುಮತ ಪಡೆಯಲಿದೆ. ಆರಗ ಜ್ಞಾನೇಂದ್ರ ಮತ್ತೆ ಉತ್ತಮ ಅವಕಾಶ ಪಡೆಯಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವರಾದ ನಂತರ ಮೊದಲ ಬಾರಿ ಜಿಲ್ಲೆಗೆ ಆಗಮಿಸಿದ್ದ ಅವರಿಗೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸ್ವಾಗತ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಆರಗ ಅವರು ನಿರಂತರ ಹೋರಾಟ, ಸಂಘಟನೆಯ ಮೂಲಕ ಮೇಲೆ ಬಂದವರು. ನಿರಂತರವಾಗಿ ಜನರ ಒಡನಾಟವಿದೆ. ಸಚಿವರಾಗಿ ಎರಡು ವರ್ಷಗಳು ಉತ್ತಮವಾಗಿ ಕೆಲಸ ಮಾಡುತ್ತಾರೆ ಎಂಬ ನಂಬಿಕೆ ಇದೆ. ಬೇರೆ ಪಕ್ಷಗಳಿಂದ ಬಂದವರ ದಿಸೆಯಿಂದ ಈಗ ಅವಕಾಶ ಸಿಕ್ಕಿದೆ. ಕೊನೆಗೂ ಸಚಿವ ಸ್ಥಾನ ಅಲಂಕರಿಸಿದ್ದಾರೆ. ಮುಂದೆ ಇನ್ನಷ್ಟು ಉತ್ತಮ ಅವಕಾಶಗಳು ದೊರೆಯಲಿವೆ ಎಂದರು.

ಮುಂದಿನ ಚುನಾವಣೆಯಲ್ಲಿ ಭದ್ರಾವತಿ ಸೇರಿದಂತೆ ಜಿಲ್ಲೆಯ ಎಲ್ಲ ಕ್ಷೇತ್ರಗಳನ್ನೂ ಗೆಲ್ಲಬೇಕು. ಪಕ್ಷವನ್ನು ಮತ್ತಷ್ಟು ಬಲಗೊಳಿಸಲು, ಸ್ಪಷ್ಟಬಹುಮತ ತಂದುಕೊಡಲು ಎಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದು ಕೋರಿದರು.

ಮಂಡ್ಯ: ಸಚಿವ ನಾರಾಯಣಗೌಡರಿಗೆ ಸಮಸ್ಯೆಗಳ ಸವಾಲು

ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಮೂರು ದಶಕಗಳು ತೀರ್ಥಹಳ್ಳಿ ಕ್ಷೇತ್ರದ ಜನರ ಸೇವೆ ಮಾಡಿರುವೆ. ಈಗ ರಾಜ್ಯದ ಜನರ ಸೇವೆ ಮಾಡುವ ಅವಕಾಶ ಲಭಿಸಿದೆ. ಕ್ಷೇತ್ರದ ಜನರ ಅನುಮತಿ ಪಡೆದು ರಾಜ್ಯದ ಕಾರ್ಯ ನೋಡಿಕೊಳ್ಳುವೆ. ಯಾವ ಖಾತೆ ಕೊಟ್ಟರೂ ನಿಭಾಯಿಸುವೆ ಎಂದರು.

ಕೋಟೆ ರಸ್ತೆಯ ಸೀತಾ ರಾಮಾಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು. ನಂತರ ಆರ್ಎಸ್ಎಸ್ ಕಚೇರಿಗೆ ಭೇಟಿ ನೀಡಿದರು. ಇಬ್ಬರೂ ಸಚಿವರಿಗೆ ಪಕ್ಷದ ಕಾರ್ಯಕರ್ತರು, ಮುಖಂಡರು ಅದ್ದೂರಿ ಸ್ವಾಗತ ನೀಡಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ಜಯಘೋಷ ಮೊಳಗಿಸಿದರು.

ಸಚಿವ ಸಂಪುಟದಲ್ಲಿಲ್ಲ ಸಾಮಾಜಿಕ ನ್ಯಾಯ: ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಬೇಸರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.