ಬುಧವಾರ, ಜೂಲೈ 8, 2020
21 °C

ರಾಜ್ಯಸಭಾ ಚುನಾವಣೆ | ಸಾಮಾನ್ಯ ಕಾರ್ಯಕರ್ತರಿಗೆ ಮಣೆ: ಈಶ್ವರಪ್ಪ ಹರ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಪಕ್ಷದ ಸಾಮಾನ್ಯ ಕಾರ್ಯಕರ್ತರನ್ನು ರಾಜ್ಯಸಭಾ ಚುನಾವಣೆಗೆ ಆಯ್ಕೆ ಮಾಡಿದ ಬಿಜೆಪಿ ವರಿಷ್ಠರ ನಿರ್ಧಾರ ಸ್ವಾಗತಾರ್ಹ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.

ಸಾಮಾನ್ಯ ಕಾರ್ಯಕರ್ತರೂ ರಾಜ್ಯಸಭೆಗೆ ಆಯ್ಕೆಯಾಗಬಹುದು ಎಂಬ ಸಂದೇಶ ವರಿಷ್ಟರು ನೀಡಿದ್ದಾರೆ. ಇಂತಹ ನಿರ್ಧಾರ ಬಿಜೆಪಿಯಲ್ಲಿ ಮಾತ್ರ ಸಾಧ್ಯ. ಅಶೋಕ್ ಗಸ್ತಿ, ಈರಣ್ಣ ಕಡಾಡಿ ಅವರು 40 ವರ್ಷಗಳಿಂದ ಪಕ್ಷಕ್ಕೆ ಸೇವೆ ಸಲ್ಲಿಸಿದ್ದಾರೆ. ಅವರ ಸೇವೆಯನ್ನು ವರಿಷ್ಠರು ಗುರುತಿಸಿದ್ದಾರೆ. ಈ ಆಯ್ಕೆ ಪಕ್ಷದ ಕಾರ್ಯಕರ್ತರಿಗೂ ಸಂತಸ ತಂದಿದೆ. ಸಣ್ಣ ಸಣ್ಣ ಜಾತಿಗಳಿಗೂ ಬಿಜಿಪಿ ಆದ್ಯತೆ ನೀಡುತ್ತದೆ ಎನ್ನುವುದಕ್ಕೆ ಇದು ಸಾಕ್ಷಿ ಎಂದರು.

ಪಕ್ಷದ ರಾಜ್ಯ ಚುನಾವಣಾ ಸಮಿತಿ ಕಳಿಸಿದ ಪಟ್ಟಿಯಲ್ಲಿ ಈ ಇಬ್ಬರ ಹೆಸರು ಇರಲ್ಲಿಲ್ಲ. ಆದರೆ, ಪಕ್ಷದ ಕೇಂದ್ರ ಚುನಾವಣಾ ಸಮಿತಿ ಕಳಿಸಿದ ಪಟ್ಟಿಯಲ್ಲಿ ಇಬ್ಬರ ಹೆಸರು ಇತ್ತು. ಅನಿರೀಕ್ಷಿತ ಆಯ್ಕೆ ಕಾರಣ ಪಕ್ಷದಲ್ಲಿ ಯಾರಿಗೂ ಅಸಮಾಧಾನ ಇಲ್ಲ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು