ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತೋಷ್ ಸಾವು ಆತ್ಮಹತ್ಯೆಯೋ, ಕೊಲೆಯೋ ಎಂಬ ಅನುಮಾನ ಶುರುವಾಗಿದೆ: ಕೆ.ಎಸ್ ಈಶ್ವರಪ್ಪ

Last Updated 17 ಏಪ್ರಿಲ್ 2022, 6:04 IST
ಅಕ್ಷರ ಗಾತ್ರ

ಶಿವಮೊಗ್ಗ: ‘ಗುತ್ತಿಗೆದಾರ ಸಂತೋಷ್‌ ಪಾಟೀಲ ಸಾವು ಆತ್ಮಹತ್ಯೆಯೋ, ಕೊಲೆಯೋ ಎಂಬ ಅನುಮಾನ ಶುರುವಾಗಿದೆ. ಈ ಕುರಿತು ಸಮಗ್ರ ತನಿಖೆ ನಡೆಸಬೇಕು’ ಎಂದು ಪ್ರಕರಣದಲ್ಲಿ ಆರೋಪಿಯೂ ಆಗಿರುವ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಒತ್ತಾಯಿಸಿದರು. ನಗರದಲ್ಲಿ ಶನಿವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.

‘ಪ್ರಕರಣದಲ್ಲಿ ಯಾರೋ ಸಂತೋಷ್‌ ಅವರನ್ನು ದುರುಪಯೋಗಪಡಿಸಿಕೊಂಡಿರುವ ಸಾಧ್ಯತೆ ಇದೆ. ಸೂಕ್ತ ತನಿಖೆಯಿಂದ ಸತ್ಯ ಹೊರಗೆ ಬರಬೇಕಿದೆ. ಪ್ರಕರಣದ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇದ್ದಾರೆ ಎನ್ನುವ ಸಂಗತಿ ಇದೆ. ತನಿಖೆ ಮೂಲಕ ಸತ್ಯ ಬಹಿರಂಗವಾಗಬೇಕಿದೆ. ನಂತರ ಈ ಕುರಿತು ಮಾತನಾಡುವೆ’ ಎಂದರು.

ಇವನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT