ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10 ತಿಂಗಳ ನಂತರ ಪಕ್ಷದ ವೇದಿಕೆಯಲ್ಲಿ ಕಾಣಿಸಿಕೊಂಡ ಕುಮಾರ್ ಬಂಗಾರಪ್ಪ

Published 18 ಮಾರ್ಚ್ 2024, 9:31 IST
Last Updated 18 ಮಾರ್ಚ್ 2024, 9:31 IST
ಅಕ್ಷರ ಗಾತ್ರ

ಶಿವಮೊಗ್ಗ: ವಿಧಾನಸಭೆ ಚುನಾವಣೆಯಲ್ಲಿ ಸೋತ ನಂತರ ಕಳೆದ 10 ತಿಂಗಳಲ್ಲಿ ಪಕ್ಷದ ವೇದಿಕೆಯಲ್ಲಿ ಕಾಣಿಸಿಕೊಳ್ಳದೇ ದೂರ ಉಳಿದಿದ್ದ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಇದೇ ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಪಕ್ಷದ ವೇದಿಕೆ ಏರಿದರು.

ಕುಮಾರ್ ಬಂಗಾರಪ್ಪ ಬರುತ್ತಿದ್ದಂತೆಯೇ ನೆರೆದವರು ಚಪ್ಪಾಳೆ, ಶಿಳ್ಳೆ, ಕೇಕೆ ಹಾಕಿ ಸ್ವಾಗತಿಸಿದರು. ಮಾಜಿ ಶಾಸಕರಿಗೆ ಮೀಸಲಿದ್ದ ಎರಡನೇ ಸಾಲಿನಲ್ಲಿ ಕುಳಿತ ಕುಮಾರ್ ಬಂಗಾರಪ್ಪ ಅವರನ್ನು ಸಂಸದ ಬಿ.ವೈ.ರಾಘವೇಂದ್ರ ಕರೆತಂದು ಮುಂದಿನ ಸಾಲಿನಲ್ಲಿ ಕೂರಿಸಿದರು.

ಕುಮಾರ್ ಬಂಗಾರಪ್ಪ ಬಿಜೆಪಿ ಬಿಡಲಿದ್ದಾರೆ. ಕಾಂಗ್ರೆಸ್ ಸೇರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಈ ಮೊದಲು ಹೇಳಲಾಗಿತ್ತು. ಗೀತಾ ಶಿವರಾಜ ಕುಮಾರ್ ಅವರಿಗೆ ಟಿಕೆಟ್ ಘೋಷಣೆ ಆಗುತ್ತಿದ್ದಂತೆಯೇ ಆ ವದಂತಿಗೆ ತೆರೆಬಿದ್ದಿತ್ತು. ಕುಮಾರ್ ಅವರನ್ನು ಉತ್ತರ ಕನ್ನಡದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುತ್ತಿದೆ ಎಂಬ ಚರ್ಚೆ ಜಿಲ್ಲೆಯಲ್ಲಿ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT