ಸೋಮವಾರ, ಜುಲೈ 4, 2022
22 °C

ಕುವೆಂಪು ವಿ.ವಿ ದೂರ ಶಿಕ್ಷಣ ಫಲಿತಾಂಶಕ್ಕೆ ತಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ದೂರ ಶಿಕ್ಷಣ ವಿಭಾಗದ 2019–20ನೇ ಸಾಲಿನ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ ಪ್ರಕಟಿಸಿದ್ದ ಫಲಿತಾಂಶವನ್ನು ತಡೆ ಹಿಡಿಯಲು ಕುವೆಂಪು ವಿಶ್ವವಿದ್ಯಾಲಯ ನಿರ್ಧರಿಸಿದೆ.

ಫಲಿತಾಂಶ ಹಿಂಪಡೆಯುವ ಕುರಿತು ಸಿಂಡಿಕೇಟ್‌, ವಿದ್ಯಾ ವಿಷಯಕ ಪರಿಷತ್ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ಪರೀಕ್ಷೆ ನಡೆಸದೇ ಫಲಿತಾಂಶ ಪ್ರಕಟಿಸಲು ನಿರ್ದೇಶನ ನೀಡುವಂತೆ ಕೆಲವು ವಿದ್ಯಾರ್ಥಿಗಳು ಹಿಂದೆ ಹೈಕೋರ್ಟ್‌ ಮೊರೆಹೋಗಿದ್ದರು. ಕೋರ್ಟ್‌ ಆದೇಶ ನೋಡಿಕೊಂಡು, ಕಾನೂನು ತಜ್ಞರ ಸಲಹೆ ಪಡೆದು ಡಿಸೆಂಬರ್‌ ಅಂತ್ಯದ ಒಳಗೆ ಪರೀಕ್ಷೆ ನಡೆಸಲಾಗುವುದು ಎಂದು ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಕೋವಿಡ್‌ ಸಮಯದಲ್ಲಿ 2019–20ನೇ ಸಾಲಿನ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೇ ತೇರ್ಗಡೆ ಮಾಡಲು ಯುಜಿಸಿ ಅವಕಾಶ ಕಲ್ಪಿಸಿತ್ತು. ಅಂದು ಫಲಿತಾಂಶ ಪ್ರಕಟಿಸಲು ವಿಳಂಬವಾಗಿತ್ತು. ಈಗ ಅದನ್ನು ಜಾರಿ ಮಾಡಿದ್ದೆವು. ಅದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಕುರಿತು ಸಿಂಡಿಕೇಟ್‌ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದು ಅಂತಿಮವಾಗಿ ಫಲಿತಾಂಶ ತಡೆಹಿಡಿಯಲು ನಿರ್ಧಾರ ಕೈಗೊಳ್ಳಲಾಗಿದೆ. ಮುಂದೆ ಇಂತಹ ಅಚಾತುರ್ಯ ನಡೆಯದಂತೆ ಎಚ್ಚರ ವಹಿಸಲಾಗುವುದು’ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕುಲಸಚಿವೆ ಜಿ.ಆನುರಾಧಾ, ಪರೀಕ್ಷಾಂಗ ಕುಲಸಚಿವ ನವೀನ್ ಕುಮಾರ್, ಸಿಂಡಿಕೇಟ್ ಸದಸ್ಯರಾದ ಬಳ್ಳೇಕೆರೆ ಸಂತೋಷ್, ಧರ್ಮಪ್ರಸಾದ್, ರಮೇಶ್ ಬಾಬು, ರಾಮಲಿಂಗಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು