ಶಿವಮೊಗ್ಗ: ಇಲ್ಲಿನ ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಬುಧವಾರ ನಡೆದ ವಿಶ್ವವಿದ್ಯಾಲಯದ 35ನೇ ಘಟಿಕೋತ್ಸವದಲ್ಲಿ ರಂಗಕರ್ಮಿ ಕೆ.ವಿ.ಅಕ್ಷರ, ಶಿಕ್ಷಣ ತಜ್ಞ ಪ್ರೊ.ಎಚ್.ಎ.ರಂಗನಾಥ್ ಹಾಗೂ ಅನುಪಸ್ಥಿತಿಯಲ್ಲಿ ಮಾಜಿ ಶಾಸಕ ಕೋಣಂದೂರು ಲಿಂಗಪ್ಪ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.

ಅನಾರೋಗ್ಯದ ಕಾರಣ ಕೋಣಂದೂರು ಲಿಂಗಪ್ಪ ಗೌರವ ಡಾಕ್ಟರೇಟ್ ಪ್ರದಾನ ಸಮಾರಂಭಕ್ಕೆ ಗೈರು ಹಾಜರಾಗಿದ್ದರು.

ಇದೇ ವೇಳೆ ರಾಜ್ಯಪಾಲರು ಕುವೆಂಪು ವಿಶ್ವವಿದ್ಯಾಲಯದ 163 ವಿದ್ಯಾರ್ಥಿಗಳಿಗೆ ಪಿಎಚ್ ಡಿ ಪದವಿ, 16,955 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು.

ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವ ಡಿ.ಸುಧಾಕರ, ರಾಷ್ಟ್ರೀಯ ಶೈಕ್ಷಣಿಕ ತಂತ್ರಜ್ಞಾನ ಫೋರಮ್ (NETF) ಅಧ್ಯಕ್ಷ ಪ್ರೊ.ಅನಿಲ್ ಡಿ.ಸಹಸ್ರಬುದ್ಧೆ, ಕುಲಪತಿ ಪ್ರೊ.ಶರತ್ ಅನಂತಮೂರ್ತಿ, ರಿಜಿಸ್ಟ್ರಾರ್ ಎನ್.ಹೇಮಂತ್ ಹಾಗೂ ಪರೀಕ್ಷಾಂಗ ವಿಭಾಗದ ಕುಲಸಚಿವ ಪ್ರೊ.ತಿಮ್ಮರಾಯಪ್ಪ ಹಾಜರಿದ್ದರು.

ಅಭಿಷೇಕ್ಗೆ 10 ಚಿನ್ನದ ಪದಕಗಳ ಗರಿ..

ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಭಾರತಿಯ ಎಚ್.ಎಂ.ಅಭಿಷೇಕ 10 ಚಿನ್ನದ ಪದಕ ಪಡೆದ ಶ್ರೇಯಕ್ಕೆ ಪಾತ್ರರಾದರೆ, ಎಂಎಸ್ಸಿ ಪರಿಸರ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ರಕ್ಷಾ ಏಳು ಚಿನ್ನದ ಪದಕ ಹಾಗೂ ಎಂಎಸ್ಸಿ ಜೈವಿಕ ತಂತ್ರಜ್ಞಾನ ವಿಭಾಗದ ಆರ್.ಸೃಷ್ಟಿ ಆರು ಚಿನ್ನದ ಪದಕ, ಎಂಬಿಎ ವಿಭಾಗದಲ್ಲಿ ಸಹನಾ ಗಣೇಶ್ ಶೇಟ್ ಹಾಗೂ ಸಮಾಜಶಾಸ್ತ್ರ ಅಧ್ಯಯನ ವಿಭಾಗದ ಎಸ್.ಸುಜನಾ ತಲಾ ಐದು ಚಿನ್ನದ ಪದಕಗಳ ಮುಡಿಗೇರಿಸಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.