ಗುರುವಾರ , ಆಗಸ್ಟ್ 13, 2020
28 °C
ರಾಜ್ಯಪಾಲರು, ಸಿಂಡಿಕೇಟ್‌ ಸಮ್ಮತಿ: ಕುಲಪತಿ ಡಾ.ಬಿ.ಪಿ.ವೀರಭದ್ರಪ್ಪ ಮಾಹಿತಿ

ಶಿವಮೊಗ್ಗ: ಜುಲೈನಲ್ಲೇ ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ 30ನೇ ಘಟಿಕೋತ್ಸವ ಆಯೋಜಿಸಲು ರಾಜ್ಯಪಾಲರು ಸಮ್ಮತಿಸಿದ್ದಾರೆ. ಜುಲೈ 28, ಅಥವಾ 29ರಂದು ನಡೆಸಲು ಸಿಂಡಿಕೇಟ್‌ ಸಹ ಅನುಮೋದಿಸಿದೆ ಎಂದು ಕುಲಪತಿ ಡಾ.ಬಿ.ಪಿ.ವೀರಭದ್ರಪ್ಪ ತಿಳಿಸಿದ್ದಾರೆ.

ಈ ವರ್ಷದ ಫೆಬ್ರುವರಿ ಅಥವಾ ಮಾರ್ಚ್‌ನಲ್ಲಿ ಘಟಿಕೋತ್ಸವ ನಡೆಯಬೇಕಿತ್ತು. ನಂತರ ಕೊರೊನಾ ನಿರ್ಬಂಧಗಳ ಕಾರಣ ವಿಳಂಬವಾಗಿದೆ. ಈ ಕುರಿತು ವಿಶ್ವವಿದ್ಯಾಲಯ ಸಲ್ಲಿಸಿದ್ದ ಮನವಿಗೆ ರಾಜ್ಯಪಾಲ ವಜ್ಜುಭಾಯಿ ವಾಲಾ ಸ್ಪಂದಿಸಿದ್ದಾರೆ. ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸಲು ಸೂಚಿಸಿದ್ದಾರೆ. ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಆಂತರಿಕ ಘಟಿಕೋತ್ಸವ, ಪೋಷಕರಿಗಿಲ್ಲ ಪ್ರವೇಶ: ಕೊರೊನಾ ಸೋಂಕು ಹೆಚ್ಚುತ್ತಿರುವ ಪರಿಣಾಮ ‘ಇನ್ ಹೌಸ್’ (ಆಂತರಿಕವಾಗಿ) ಮಾದರಿಯಲ್ಲಿ ಆಯೋಜಿಸಲಾಗುವುದು. ಒಂದು ಸಾವಿರ ಸಭಿಕರು ಭಾಗವಹಿಸಬಹುದಾದ ಹೊಸ ಘಟಿಕೋತ್ಸವ ಸಭಾಂಗಣದಲ್ಲಿ ಅಂತರ ಕಾಯ್ದುಕೊಂಡು ಸರ್ಕಾರದ ಮಾರ್ಗದರ್ಶಿ ಸೂತ್ರಗಳ ಅನ್ವಯ ಘಟಿಕೋತ್ಸವ ನಡೆಸಲಾಗುವುದು. ರ್‍ಯಾಂಕ್‌ ವಿಜೇತರು, ಪಿಎಚ್‍.ಡಿ ಪದವೀಧರರು, ಗೌರವ ಡಾಕ್ಟರೇಟ್ ಪಡೆದವರು, ಸಿಂಡಿಕೇಟ್ ಸದಸ್ಯರು, ಶೈಕ್ಷಣಿಕ ಮಂಡಳಿ ಸದಸ್ಯರು ಮತ್ತು ವಿಶ್ವವಿದ್ಯಾಲಯದ ಸಿಬ್ಬಂದಿ ಒಳಗೊಂಡಂತೆ ಸುಮಾರು 500 ಆಹ್ವಾನಿತರಿಗೆ ಅವಕಾಶ ನೀಡಲಾಗುವುದು. ಪೋಷಕರು, ಸಾರ್ವಜನಿಕರಿಗೆ ಪ್ರವೇಶ ಇಲ್ಲ ಎಂದು ಖಚಿತಪಡಿಸಿದ್ದಾರೆ.

ಜೇಷ್ಠತಾ ಪಟ್ಟಿಗೆ ಅನುಮೋದನೆ: ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಕುವೆಂಪು ವಿಶ್ವವಿದ್ಯಾಲಯದ ಅಧ್ಯಾಪಕೇತರ ನೌಕರರ ಜೇಷ್ಠತಾ ಪಟ್ಟಿಯನ್ನು ಅನುಷ್ಠಾನಗೊಳಿಸಲು ಸಭೆ ಒಪ್ಪಿಗೆ ನೀಡಿದೆ. ಬಡ್ತಿ ಮತ್ತ ವೇತನ ಸವಲತ್ತು ಪರಿಗಣಿಸಿ ಅರ್ಹ ಸಿಬ್ಬಂದಿಗೆ ಒದಗಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು