ಶನಿವಾರ, ಜೂನ್ 25, 2022
21 °C

ಕನಿಷ್ಠ ಕೂಲಿಗೆ ಗ್ರಾ.ಪಂ. ನೌಕರರ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಕನಿಷ್ಠ ಕೂಲಿ ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ಸಿಐಟಿಯು ನೇತೃತ್ವದಲ್ಲಿ ಸೋಮವಾರ ಜಿಲ್ಲಾ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದರು.

ಗ್ರಾಮ ಪಂಚಾಯಿತಿಗಳಲ್ಲಿ ಕರ ವಸೂಲಿಗಾರ, ಜವಾನ, ನೀರುಗಂಟಿ, ಜಾಡಮಾಲಿ ಹಾಗೂ ಇತರೆ ನೌಕರರು ಹಲವು ವರ್ಷಗಳಿಂದ ಕೆಲಸ ಮಾಡುತ್ತಾ ಬಂದಿದ್ದಾರೆ. ಅವರಿಗೆ ಕನಿಷ್ಠ ವೇತನ ಬಡ್ತಿ ನೀಡಿಲ್ಲ. ಹಲವು ಬಾರಿ ಪ್ರತಿಭಟನೆ, ಹೋರಾಟ ನಡೆಸಿದರೂ, ಸ್ಪಂದನೆ ದೊರೆತಿಲ್ಲ ಎಂದು ದೂರಿದರು.

21 ಸಾವಿರ ಕನಿಷ್ಠ ಕೂಲಿ ನೀಡಬೇಕು. 15ನೇ ಹಣಕಾಸು ಯೋಜನೆಯಲ್ಲಿ ವೇತನದ ಮೊತ್ತ ಮೀಸಲಿಡಬೇಕು.ಜಿಲ್ಲಾ ಪಂಚಾಯಿತಿಗಳಲ್ಲಿ ಹೊಸ ನೇಮಕಾತಿ ಮಾಡಿಕೊಳ್ಳಬೇಕು. ಪದೋನ್ನತಿ ನೀಡಬೇಕು. ಸೇವಾ ಪುಸ್ತಕ ಇಡಬೇಕು. ವಿದ್ಯಾರ್ಹತೆಗೆ ಅನುಗುಣವಾಗಿ ಪಂಚಾಯಿತಿ ಸಿಬ್ಬಂದಿ ನೇಮಕ ಮಾಡಿಕೊಳ್ಳಬೇಕು. ಸುರಕ್ಷತಾ ಸಾಧನ ನೀಡಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಆಗ್ರಹಿಸಿದರು.

ಸಂಘದ ಅಧ್ಯಕ್ಷ ಬಂಗಾರಪ್ಪ, ಉಮೇಶ್, ಪ್ರಶಾಂತ್, ನಾರಾಯಣ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು