ಸೋಮವಾರ, ಮಾರ್ಚ್ 20, 2023
30 °C
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ

ಪಂಚಾಯಿತಿಗಳಿಗೆ ಕೆರೆಕುಂಟೆ ಅಭಿವೃದ್ಧಿ ಜವಾಬ್ದಾರಿ: ಕೆ.ಎಸ್.ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭದ್ರಾವತಿ: ಪಂಚಾಯಿತಿ ವ್ಯಾಪ್ತಿಯ ಕೆರೆಕುಂಟೆ ಅಭಿವೃದ್ಧಿ ಮಾಡುವ ಜವಾಬ್ದಾರಿಯನ್ನು ಗ್ರಾಮ ಪಂಚಾಯಿತಿಗಳಿಗೆ ವಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಸೋಮವಾರ ಅಂತರಗಂಗೆ ಗ್ರಾಮದ ಘನತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ‘ಈ ವ್ಯವಸ್ಥೆಯಿಂದ ಜಲಸಂರಕ್ಷಣೆ ಕಾರ್ಯದಲ್ಲಿ ಪಂಚಾಯಿತಿಗಳು ಕಾಮಗಾರಿ ಕೈಗೊಳ್ಳಲು ಸಾಧ್ಯವಾಗುತ್ತದೆ’ ಎಂದರು.

ಸರ್ಕಾರದ ಹಲವು ಯೋಜನೆಗಳ ಅನುಷ್ಠಾನ ಪಂಚಾಯಿತಿ ವ್ಯಾಪ್ತಿಯಲ್ಲಿದ್ದು, ಅವುಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ತರಬೇತಿ ನೀಡಲಾಗುವುದು. ಉದ್ಯೋಗ ಖಾತ್ರಿ ಯೋಜನೆಯಡಿ 15 ದಿನದೊಳಗೆ ಕೂಲಿ ಪಾವತಿ ಪ್ರಕ್ರಿಯೆ ನಡೆದಿದೆ. ಕೆಲಸ ಕೇಳಿದ ತಕ್ಷಣ ಅದಕ್ಕೆ ವ್ಯವಸ್ಥೆ ಮಾಡಿಕೊಳ್ಳುವಂತೆ ಪಂಚಾಯಿತಿಗಳಿಗೆ ಸೂಚನೆ ನೀಡಲಾಗಿದೆ. ಅವರು ನಿಶ್ಚಿತ ಗುರಿ ಸಾಧನೆ ಮಾಡಿದ್ದರಿಂದ ಹೆಚ್ಚುವರಿಯಾಗಿ 2 ಕೋಟಿ ಮಾನವ ದಿನಗಳನ್ನು ಪಡೆಯಲು ಸಾಧ್ಯವಾಗಿದೆ ಎಂದು ಹೇಳಿದರು.

ಘನತ್ಯಾಜ್ಯ ನಿರ್ವಹಣೆ ಕೆಲಸವನ್ನು ಪಂಚಾಯಿತಿ ಮಟ್ಟದಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಮಾಡಲು ಮನೆಗಳ ಕಸ ಸಂಗ್ರಹಣೆಗೆ ವಾಹನಗಳನ್ನು ಬಳಸಲಾಗುವುದು. ಇದಕ್ಕೆ ನಾಗರಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಬಿ.ಕೆ. ಸಂಗಮೇಶ್ವರ, ‘ಗ್ರಾಮೀಣ ಭಾಗದಲ್ಲಿ ಸ್ವಚ್ಛತೆ ಕುರಿತು ಅರಿವು ಮೂಡಿಸುವ ಕೆಲಸ ನಡೆಯಬೇಕಿದೆ. ತ್ಯಾಜ್ಯ ನಿರ್ವಹಣೆ ಘಟಕಗಳ ಸಮರ್ಪಕ ನಿರ್ವಹಣೆಗೆ ಇನ್ನಷ್ಟು ಅನುದಾನದ ಅಗತ್ಯವಿದೆ’ ಎಂದು ಹೇಳಿದರು.

ವಿಧಾನಪರಿಷತ್ ಸದಸ್ಯ ಪ್ರಸನ್ನಕುಮಾರ್, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವೈಶಾಲಿ,
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸವಿತ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.