ಮಂಗಳವಾರ, ಅಕ್ಟೋಬರ್ 27, 2020
24 °C

ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯಿಂದ ರೈತರಿಗೆ ಅನುಕೂಲ: ಟಿ.ಡಿ. ಮೇಘರಾಜ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆಗೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅನುಮೋದನೆ ದೊರೆತಿದ್ದು, ರೈತರಿಗೆ ಅನುಕೂಲವಾಗಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ತಿಳಿಸಿದರು.

ರೈತರ ಉತ್ಪನ್ನ, ವ್ಯಾಪಾರ ಮತ್ತು ವಾಣಿಜ್ಯ ಕಾಯ್ದೆ, ರೈತರ ಬೆಳೆ ಭರವಸೆ ಮತ್ತು ಸೇವಾ ಒಪ್ಪಂದ ಮಸೂದೆ ಅನುಮೋದನೆಯಿಂದ ರೈತರಿಗೆ ಹಾಗೂ ವ್ಯಾಪಾರಿಗಳಿಗೆ ತಮಗಿಷ್ಟ ಬಂದ ಕಡೆ ಕೃಷಿ ಉತ್ಪನ್ನ ಮಾರಾಟ ಹಾಗೂ ಖರೀದಿ ಮಾಡಲು ಸರ್ಕಾರ ಸ್ವಾತಂತ್ರ್ಯ ನೀಡಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.

ಈ ಮಸೂದೆಗಳು ದೇಶದ ಕೃಷಿ ವಲಯದಲ್ಲಿ ಕ್ರಾಂತಿ ತರಲಿವೆ. ಜೊತೆಗೆ ಕನಿಷ್ಠ ಬೆಂಬಲ ದರ ವ್ಯವಸ್ಥೆಯೂ ಮುಂದುವರಿಯಲಿದೆ. ಕೃಷಿ ವಲಯದಿಂದ ದೇಶಕ್ಕಿರುವ ನಿರೀಕ್ಷೆ ಹಾಗೂ ಅಗತ್ಯ ಎರಡನ್ನೂ ಹೊಸ ಮಸೂದೆಗಳು ಪೂರೈಸಲಿವೆ. ಒಮ್ಮೆ ಹೆಚ್ಚುವರಿ ಇಳುವರಿ ಪಡೆದರೆ ರೈತನ ಆದಾಯವೂ ಹೆಚ್ಚುತ್ತದೆ ಎಂದರು. ಮಂಡೇನಕೊಪ್ಪ ಗಂಗಾಧರ್, ಕೃಷ್ಣೋಜಿರಾವ್, ಕೆ.ವಿ.ಅಣ್ಣಪ್ಪ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು