ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಾಗರ | ಭೂ ಕುಸಿತ: ಮುಂಜಾಗ್ರತೆ ಕ್ರಮ ಕೈಗೊಳ್ಳಲು ಶಾಸಕ ಸೂಚನೆ

Published 5 ಆಗಸ್ಟ್ 2024, 15:58 IST
Last Updated 5 ಆಗಸ್ಟ್ 2024, 15:58 IST
ಅಕ್ಷರ ಗಾತ್ರ

ಸಾಗರ: ಅತಿವೃಷ್ಟಿಯಿಂದಾಗಿ ಭೂ ಕುಸಿತವಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಪಾಯಕಾರಿ ಪ್ರದೇಶಗಳನ್ನು ಮೊದಲೇ ಗುರುತಿಸಿ ಅಧಿಕಾರಿಗಳು ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ ನೀಡಿದ್ದಾರೆ.

ತಾಲ್ಲೂಕಿನ ಹೆಗ್ಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗಟ್ಟು ಗ್ರಾಮಕ್ಕೆ ರಸ್ತೆಯಲ್ಲಿ ಭೂ ಕುಸಿತ ಉಂಟಾಗಿದ್ದು, ಭಾನುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾತನಾಡಿದ ಅವರು, ‘ಕೇರಳದ ವಯನಾಡು, ಉತ್ತರ ಕನ್ನಡ ಜಿಲ್ಲೆಯ ಅಂಕೋಲ ಸಮೀಪದ ಶಿರೂರಿನಲ್ಲಿ ಉಂಟಾಗಿರುವ ಭೂ ಕುಸಿತದಿಂದ ನಾವು ಪಾಠ ಕಲಿಯಬೇಕಿದೆ’ ಎಂದರು.

‘ಅವೈಜ್ಞಾನಿಕವಾಗಿ ಗುಡ್ಡಗಳನ್ನು ಕಡಿಯುವುದರಿಂದ, ಮರ ಗಿಡಗಳನ್ನು ನಾಶ ಮಾಡುವುದರಿಂದ ಭೂ ಕುಸಿತ ಸಂಭವಿಸುತ್ತದೆ. ಹೆಗ್ಗಟ್ಟು ಭಾಗದಲ್ಲಿ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿ ಹಳ್ಳದ ನೀರು ಹರಿಯಲು ಅಡ್ಡಿ ಪಡಿಸಿರುವುದರಿಂದ ಭೂ ಕುಸಿತ ಉಂಟಾಗಿದೆ ಎಂಬ ದೂರುಗಳಿವೆ. ಈ ಬಗ್ಗೆ ಪರಿಶೀಲನೆ ನಡೆಸಿ’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ತಾಲ್ಲೂಕಿನಲ್ಲಿ 100ಕ್ಕೂ ಹೆಚ್ಚು ಮನೆಗಳಿಗೆ ಮಳೆಯಿಂದಾಗಿ ಹಾನಿ ಉಂಟಾಗಿದೆ. ಕೊಟ್ಟಿಗೆಗಳು ಬಿದ್ದಿವೆ. ಸರ್ಕಾರದಿಂದ ಹಾನಿಯ ಪ್ರಮಾಣವನ್ನು ಅಂದಾಜು ಮಾಡಿ ಶೀಘ್ರ ಪರಿಹಾರ ವಿತರಿಸಲಾಗುವುದು’ ಎಂದು ತಿಳಿಸಿದರು.

ಪ್ರಮುಖರಾದ ಮಂಜಪ್ಪ ಗೌಡ, ಕೆ.ಹೊಳಿಯಪ್ಪ, ಕಲಸೆ ಚಂದ್ರಪ್ಪ, ಸ್ಥಳೀಯ ಪಂಚಾಯಿತಿ ಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT