ಗುರುವಾರ , ಆಗಸ್ಟ್ 13, 2020
28 °C

ಶಿವಮೊಗ್ಗ | ತಡರಾತ್ರಿ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ನಗರದ ಹಲವು ಬಡಾವಣೆಗಳಲ್ಲಿ ಬೀದಿಬದಿ ನಿಲ್ಲಿಸಿದ್ದ ವಾಹನಗಳಿಗೆ ಶುಕ್ರವಾರ ತಡರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.

ನಗರದ ಎನ್.ಟಿ. ರಸ್ತೆ, ಇಲಿಯಾಸ್ ನಗರ, ನ್ಯೂಮಂಡ್ಲಿ, ಸವಾಯ್ ಪಾಳ್ಯ, ಸೀಗೆಹಟ್ಟಿ ಬಡಾವಣೆಗಳಲ್ಲಿ ಈ ಕೃತ್ಯ ನಡೆದಿದೆ. 

ಬೈಕ್‌ಗಳಲ್ಲಿ ಬಂದ ಕಿಡಿಗೇಡಿಗಳು ಲಾರಿ, ಹಣ್ಣಿನ ಗಾಡಿ, ಆಟೊರಿಕ್ಷಾ, ಟಾಟಾ ಸರಕು ಸಾಗಣೆ ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಕಿಡಿಗೇಡಿಗಳ ಈ ಕೃತ್ಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. 

ವಾಹನಗಳ ಮಾಲೀಕರು ದೊಡ್ಡಪೇಟೆ ಠಾಣೆಗೆ ದೂರು ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು