ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ಬೆಳವಣೆಗೆಗೆ ನಾಯಕತ್ವ ಮುಖ್ಯ

ಅಡ್ಡಪಲ್ಲಕ್ಕಿ ಮಹೋತ್ಸವದ ಧರ್ಮಸಭೆಯಲ್ಲಿ ಬಿ.ವೈ.ವಿಜಯೇಂದ್ರ
Last Updated 6 ಜೂನ್ 2022, 3:08 IST
ಅಕ್ಷರ ಗಾತ್ರ

ಶಿರಾಳಕೊಪ್ಪ: ದೇಶದ ಬೆಳವಣಿಗೆಗೆ ನಾಯಕತ್ವ ಬಹುಮುಖ್ಯ. ಜಗತ್ತಿನಲ್ಲಿ ಭಾರತೀಯರು ತಲೆ ಎತ್ತಿ ನಡೆಯುವ ಹಾಗೆ ದೇಶದ ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಪಟ್ಟಣದ ಇಂದಿರಾಗಾಂಧಿ ಕ್ರೀಡಾಂಗಣದಲ್ಲಿ ಬಾಳೆಹೊನ್ನೂರು ರಂಭಾಪುರಿ ಸ್ವಾಮೀಜಿ ಅವರ ಅಡ್ಡಪಲ್ಲಕ್ಕಿ ಮಹೋತ್ಸವದ ಪ್ರಯುಕ್ತ ಭಾನುವಾರ ನಡೆದ ಧರ್ಮಸಭೆ ಉದ್ದೇಶಿಸಿ ಅವರು ಮಾತನಾಡಿದರು.

ನಂಜುಂಡಪ್ಪ ವರದಿಯಲ್ಲಿ ಹಿಂದುಳಿದ ತಾಲ್ಲೂಕು ಎಂದು ಗುರುತಿಸಲಾಗಿದ್ದ ಶಿಕಾರಿಪುರ ವನ್ನು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾದರಿ ಕ್ಷೇತ್ರವಾಗಿ ನಿರ್ಮಾಣ ಮಾಡಿದ್ದಾರೆ. ಅವರು ಅಧಿಕಾರಕ್ಕೆ ಅಂಟಿಕೊಳ್ಳಲಿಲ್ಲ. ಅಧಿಕಾರದಿಂದ ಕೆಳಗಿಳಿದ ಮೇಲೂ ಕೂಡ ರಾಜ್ಯದ ಜನರ ಹಿತಕ್ಕಾಗಿ ದುಡಿಯುತ್ತಿದ್ದಾರೆ ಎಂದು ತಿಳಿಸಿದರು.

ಕೃಷಿ ಸಚಿವ ಬಿ.ಸಿ. ಪಾಟೀಲ ಮಾತನಾಡಿ, ‘ಧರ್ಮ ಜಾಗೃತಿ, ಧರ್ಮ ಮಾರ್ಗದರ್ಶನ ಮಾಡುತ್ತಿರುವ ಸ್ವಾಮೀಜಿಗಳ ಕಾರ್ಯ ಅನನ್ಯವಾದುದು. ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ರೈತರಿಗೆ ಡೀಸೆಲ್ ಸಬ್ಸಿಡಿ, ಡ್ರಿಪ್ ಸಬ್ಸಿಡಿ, ಕೇಂದ್ರ ಸರ್ಕಾರದಿಂದ ಹತ್ತು ಸಾವಿರ ರೂಪಾಯಿಗಳ ಕೃಷಿ ಸನ್ಮಾನ್ ಸೇರಿ ಹತ್ತು ಹಲವು ಯೋಜನೆಗಳನ್ನು ರೈತರಿಗಾಗಿ ನೀಡಿದ್ದೇವೆ’ ಎಂದರು.

ಸಂಸದ ಬಿ.ವೈ. ರಾಘವೇಂದ್ರ, ‘ಒಂದು ವರ್ಷದ ಹಿಂದೆಯೇ ಅಡ್ಡಪಲ್ಲಕ್ಕಿ ಉತ್ಸವವನ್ನು ಮಾಡಬೇಕೆಂದು ಬಯಸಿದ್ದರೂ ಆಗಿರಲಿಲ್ಲ. ಈಗ ಆ ಕಾರ್ಯ ನೆರೆವೇರಿದೆ ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಭಕ್ತರು ಧರ್ಮದ ಕಾರ್ಯಗಳಿಗೆ ಕೊರತೆ ಆಗದಂತೆ ನೋಡಿಕೊಂಡಿದ್ದಾರೆ’ ಎಂದು ಶ್ಲಾಘಿಸಿದರು.

ಬಾಳೆಹೊನ್ನೂರು ರಂಭಾಪುರಿ ಸ್ವಾಮೀಜಿ ಆಶೀರ್ವಚನ ನೀಡಿದರು. ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ತೊಗರ್ಸಿ ಮಹಾಂತ ದೇಶೀಕೇಂದ್ರ ಸ್ವಾಮೀಜಿ, ಜಡೆ ಮಹಾಂತ ಸ್ವಾಮೀಜಿ, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪ, ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ರೇವಣಪ್ಪ, ಕೆ.ಎಸ್.ಡಿ.ಎಲ್. ನಿರ್ದೇಶಕಿ ನಿವೇದಿತಾ ರಾಜು ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT