ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮರಿ | ಹಸುಗಳ ಮೇಲೆ ಚಿರತೆ ದಾಳಿ: ಗ್ರಾಮಸ್ಥರ ಆತಂಕ

Published 29 ನವೆಂಬರ್ 2023, 15:42 IST
Last Updated 29 ನವೆಂಬರ್ 2023, 15:42 IST
ಅಕ್ಷರ ಗಾತ್ರ

ತುಮರಿ: ಶರಾವತಿ ಹಿನ್ನೀರಿನ ಭಾಗದಲ್ಲಿ ದಿನದಿಂದ ದಿನಕ್ಕೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗುತ್ತಿದ್ದು, ಗ್ರಾಮದಲ್ಲಿ ಮೇಯುತ್ತಿದ್ದ ಹಸುಗಳ ಮೇಲೆ ಚಿರತೆ ದಾಳಿ ಮಾಡಿ ಕೊಂದು ಹಾಕುವ ಘಟನೆಗಳು ಹೆಚ್ಚುತ್ತಿವೆ.

ಇಲ್ಲಿನ ಚನ್ನಗೊಂಡ ಗ್ರಾಮದ ಸಿಗ್ಗಲು, ಖಡಕಂಟ, ಔಡಳ್ಳಿ, ಯಲದಮಕ್ಕಿ, ಮದನಗೋಡು ಹಳ್ಳಿಗಳಲ್ಲಿ ಚಿರತೆ ದಾಳಿ ಹೆಚ್ಚಾಗಿದೆ. ಈಗಾಗಲೇ 5ಕ್ಕೂ ಹೆಚ್ಚು ಹಸುಗಳನ್ನು ಕೊಂದು ಹಾಕಿದ್ದು, ರೈತರ ಬೆಳೆಗಳನ್ನು ಸಹ ಹಾನಿ ಮಾಡುತ್ತಿದೆ. ಇದರಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

‘ಚಿರತೆ ಭಯದಿಂದ ಜನರು ಮನೆಯಿಂದ ಹೊರಗೆ ಬರಲು ಭಯ ಪಡುತ್ತಿದ್ದು, ಶೀಘ್ರ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲು ಕ್ರಮ ಕೈಗೊಳ್ಳಬೇಕು’ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಯೋಗೇಶ್, ‘ಚಿರತೆ ಹಿಡಿಯಲು ಬೋನ್ ಆಳವಡಿಸಲಾಗಿದ್ದು, ಶೀಘ್ರ ಚಿರತೆ ಸೆರೆ ಹಿಡಿಯಲಾಗುವುದು. ಒಂಟಿ ಮನೆಯ ರೈತರು ಜಾಗರೂಕತೆಯಿಂದ ಇರಬೇಕು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT